ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ತೆರೆ ಮೇಲೆ ಮತ್ತೆ 'ಭೈರತಿ ರಣಗಲ್ಲು' ಆರ್ಭಟ

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡಿದ್ದ ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿರ್ವಹಿಸಿದ್ದ ಭೈರತಿ ರಣಗಲ್ಲು ಪಾತ್ರದ ಹೆಸರು ಇದೀಗ...

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡಿದ್ದ ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿರ್ವಹಿಸಿದ್ದ ಭೈರತಿ ರಣಗಲ್ಲು ಪಾತ್ರದ ಹೆಸರು ಇದೀಗ ಸಿನಿಮಾ ಟೈಟಲ್ ಆಗಿದೆ. 
ಶಿವರಾಜ್ ಕುಮಾರ್ ನಿರ್ವಹಿಸಿದ್ದ ಭೈರತಿ ರಣಗಲ್ಲು ಪಾತ್ರವು ಅಭಿಮಾನಿಗಳಿಂದ ಹೆಚ್ಚು ಪ್ರಶಂಸೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಶೀರ್ಷಿಕೆಯನ್ನಿಟ್ಟುಕೊಂಡು ಚಿತ್ರ ತಯಾರಾಗಲಿದೆ. ಈ ಚಿತ್ರ ಶಿವರಾಜ್ ಕುಮಾರ್ ಅವರ ಸ್ವಂತ ಬ್ಯಾನರ್ ಶ್ರೀ ಮುತ್ತು ಪ್ರೋಡೆಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಮಫ್ತಿ ಚಿತ್ರವನ್ನು ನಿರ್ದೇಶಿಸಿದ್ದ ನರ್ತನ್ ಮತ್ತು ಛಾಯಾಗ್ರಾಹಕ ನವೀನ್ ಕುಮಾರ್ ಮತ್ತೆ ಈ ಚಿತ್ರಕ್ಕೆ ಒಂದಾಗಲಿದ್ದಾರೆ. 
ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆಟಪ್, ಸ್ಟೈಲ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಚಿತ್ರದಲ್ಲಿ ಸಂಪೂರ್ಣವಾಗಿ ಕಪ್ಪು ಶರ್ಟ್ ಮತ್ತು ಪಂಚೆ ಧರಿಸಿ ಭೈರತಿ ರಣಗಲ್ಲು ಎಂಬ ಡಾನ್ ಪಾತ್ರದಲ್ಲಿ ಶಿವರಾಜ್ ಕುಮಾರ್ ಮಿಂಚಿದ್ದರು. 
ಈ ಬಗ್ಗೆ ಸಿಟಿ ಎಕ್ಸ್ ಪ್ರೆಸ್ ಜತೆ ಮಾತನಾಡಿರುವ ಶಿವರಾಜ್ ಕುಮಾರ್ ಅವರು, ನಮ್ಮ ಪಾತ್ರವನ್ನು ಜನರು ಗುರುತಿಸಿ ನಮ್ಮನ್ನು ಪ್ರೋತ್ಸಾಹಿಸಿದಾಗ ನಮಗೆ ಹೆಚ್ಚು ತೃಪ್ತಿ ನೀಡುತ್ತದೆ. ಭೈರತಿ ರಣಗಲ್ಲು ಪಾತ್ರ ನೀಡಿದ್ದಕ್ಕಾಗಿ ನಿರ್ದೇಶಕ ನರ್ತನ್ ಗೆ ನಾನು ಧನ್ಯವಾದ ಹೇಳಬೇಕು. ಈ ಪಾತ್ರವು ನನಗೆ ಒಂದು ನಿರ್ದಿಷ್ಟ ಗುರುತನ್ನು ನೀಡಿದೆ ಎಂದರು. 
ಇನ್ನು ಇದೇ ಶೀರ್ಷಿಕೆಯನ್ನಿಟ್ಟುಕೊಂಡು ನನ್ನ ಸ್ವಂತ ಬ್ಯಾನರ್ ನಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲು ನಿರ್ಧರಿಸಿದ್ದೇನೆ. ಭೈರತಿ ರಣಗಲ್ಲು ಪಾತ್ರವು ಮತ್ತೆ ಬೆಳ್ಳಿಪರದೆ ಮೇಲೆ ವಿಜೃಂಭಿಸಬೇಕು. ಹಾಗಂತ ಈ ಚಿತ್ರ ನನ್ನ ಸ್ವಂತ ಬ್ಯಾನರ್ ನ ಮೊದಲ ಚಿತ್ರವೇನಲ್ಲ. ಮೊದಲಿಗೆ ಇತರ ಕಲಾವಿದರ ಚಿತ್ರವನ್ನು ತಯಾರಿಸಲು ನಾನು ಯೋಜನೆ ರೂಪಿಸಿದ್ದೇನೆ. ಆ ಯೋಜನೆಯ ಮಾತುಕತೆಗಳು ನಡೆದ ನಂತರ ಚಿತ್ರದ ಕುರಿತು ಅಧಿಕೃತ ಮಾಹಿತಿ ನೀಡುತ್ತೇನೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು