ವೀರವನಿತೆ 'ವೀರಮಾದೇವಿ' ಪಾತ್ರದಲ್ಲಿ ಸನ್ನಿ ಲಿಯೋನ್ 
ಸಿನಿಮಾ ಸುದ್ದಿ

ವೀರವನಿತೆ 'ವೀರಮಾದೇವಿ' ಪಾತ್ರದಲ್ಲಿ ಸನ್ನಿ ಲಿಯೋನ್!

ಬಾಲಿವುಡ್ ಮಾದಕ ಬೆಡಗಿ ಸನ್ನಿ ಲಿಯೋನ್ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದರಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಚೆನ್ನೈ: ಬಾಲಿವುಡ್ ಮಾದಕ ಬೆಡಗಿ ಸನ್ನಿ ಲಿಯೋನ್ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದರಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ.
ದಕ್ಷಿಣ ಭಾರತದ ಐತಿಹಾಸಿಕ ಕಥೆಯನ್ನಾಧರಿಸಿದ ಚಿತ್ರಕ್ಕೆ ಸನ್ನಿ ಲಿಯೋನ್ ನಾಯಕಿ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ವೀರವನಿತೆ ವೀರಮಾದೇವಿ ಪಾತ್ರದಲ್ಲಿ ಸನ್ನಿ ಕಾಣಿಸಿಕೊಳ್ಳಲಿದ್ದಾರೆ. ಈ ಬಹು ನಿರೀಕ್ಷಿತ ಚಿತ್ರವು ತಮಿಳು,  ತೆಲುಗು ಮತ್ತು ಕನ್ನಡ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇನ್ನು ಈ ಚಿತ್ರಕ್ಕೆ ನಿರ್ದೇಶಕ ವಡಿವುಡೈಯಾನ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕಾಗಿ ಸನ್ನಿ ಬರೊಬ್ಬರಿ 150  ದಿನಗಳ ಕಾಲ್ ಶೀಟ್ ನೀಡಿದ್ದಾರಂತೆ. 
ಈ ಚಿತ್ರದಲ್ಲಿ ನಟಿ ಸನ್ನಿ ಲಿಯೋನ್ ವೀರವನಿತೆಯಾಗಿ ಕಾಣಿಸಿಕೊಳ್ಳುತ್ತಿದ್ದು, ಇದಕ್ಕಾಗಿ ಮಾರ್ಷಲ್ ಆರ್ಟ್ಸ್, ಕತ್ತಿ ವರಸೆ ಮತ್ತು ಕುದುರೆ ಸವಾರಿ ಕಲಿಯುತ್ತಿದ್ದಾರಂತೆ. ಜನವರಿ ತಿಂಗಳಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುವ  ಸಾಧ್ಯತೆ ಇದ್ದು, ಚಿತ್ರಕ್ಕಾಗಿ ಬೃಹತ್ ಅರಮನೆ ಮತ್ತು ರಣಾಂಗಣದ ಸೆಟ್ ಗಳನ್ನು ನಿರ್ಮಿಸಲಾಗುತ್ತಿದೆ. ಇನ್ನು ಚಿತ್ರದಲ್ಲಿ ಸುಮಾರು 70 ನಿಮಿಷಗಳಷ್ಟು ಸುಧೀರ್ಘ ಕಂಪ್ಯೂಟರ್ ಗ್ರಾಫಿಕ್ಸ್ ಇರಲಿದೆಯಂತೆ. ಚಿತ್ರವನ್ನು ಪೊನ್ಸ್  ಸ್ಟೀಫನ್ ನಿರ್ಮಾಣ ಮಾಡುತ್ತಿದ್ದು, ನವ್ ದೀಪ್ ಖಳನಾಯಕನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ