ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಅಂಜನಿಪುತ್ರ' ವಿವಾದಿತ ಸಂಭಾಷಣೆಗೆ ಕತ್ತರಿ, ತಡೆಯಾಜ್ಞೆ ತೆರವು

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ವಿವಾದ ಸುಖಾಂತ್ಯ ಕಂಡಿದ್ದು, ಚಿತ್ರ ಪ್ರದರ್ಶನಕ್ಕೆ....

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ವಿವಾದ ಸುಖಾಂತ್ಯ ಕಂಡಿದ್ದು, ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಶುಕ್ರವಾರ ತೆರವುಗೊಳಿಸಲಾಗಿದೆ.
ಅಂಜನಿಪುತ್ರ ಚಿತ್ರ ನಿರ್ಮಾಪಕರು ಮತ್ತು ವಕೀಲರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಚಿತ್ರದಿಂದ ವಿವಾದಿತ ಸಂಭಾಷಣೆಯನ್ನು ತೆಗೆದು ಹಾಕಲು ಒಪ್ಪಿಗೆ ಸೂಚಿಸಲಾಗಿದೆ. ಅಲ್ಲದೆ ನಿರ್ದೇಶಕ ಹರ್ಷ ಬಹಿರಂಗ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಅರ್ಜಿ ಹಿಂಪಡೆಯುವದಾಗಿ ನ್ಯಾಯಾಲಯಕ್ಕೆ ಅರ್ಜಿದಾರರ ಪರ ವಕೀಲ ನಾರಾಯಣಸ್ವಾಮಿ ಮೆಮೊ ಸಲ್ಲಿಸಿದರು.
ಕೋರ್ಟ್​ ತಡೆಯಾಜ್ಞೆ ಇದ್ದರೂ ಚಿತ್ರ ಪ್ರದರ್ಶಿಸಿದ ನಿರ್ಮಾಪಕರಿಗೆ ದಂಡ ವಿಧಿಸುವಂತೆ ಅರ್ಜಿದಾರರ ಪರ ವಕೀಲರು ಮೆಮೋದಲ್ಲಿ ಕೋರಿದ್ದರು. ವಕೀಲರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ ನಿರ್ಮಾಪಕರಿಗೆ 25 ಸಾವಿರ ರು. ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ವಕೀಲರ ಕಲ್ಯಾಣ ನಿಧಿಗೆ ಪಾವತಿಸುವಂತೆ ಆದೇಶಿಸಿದೆ.
ಚಿತ್ರದಲ್ಲಿ ವಕೀಲರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಬಳಕೆ ಮಾಡಲಾಗಿದ್ದು, ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಕೋರಿ ವಕೀಲ ನಾರಾಯಣಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜನವರಿ 2ರ ವರೆಗೆ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT