ಮೋಹನ್ ಲಾಲ್ ಮುಂದಿನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ನಾಯಕಿ
ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರ ಮುಂದಿನ ಚಿತ್ರಕ್ಕೆ ಹನ್ಸಿಕಾ ಮೋಟ್ವಾನಿ ನಾಯಕಿಯಾಗಲಿದ್ದಾರೆ. ...
ಕೊಚ್ಚಿ: ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರ ಮುಂದಿನ ಚಿತ್ರಕ್ಕೆ ಹನ್ಸಿಕಾ ಮೋಟ್ವಾನಿ ನಾಯಕಿಯಾಗಲಿದ್ದಾರೆ.
ಚಿತ್ರದ ನಿರ್ದೇಶಕ ಬಿ ಉನ್ನಿಕೃಷ್ಣನ್ ತಮ್ಮ ಫೇಸ್ ಬುಕ್ ನಲ್ಲಿ ಅಧಿಕೃತವಾಗಿ ಈ ವಿಚಾರ ಹಂಚಿಕೊಂಡಿದ್ದಾರೆ. ಬೋಗಾನ್ ಚಿತ್ರದಲ್ಲಿ ನಟಿಸುತ್ತಿರುವ ಹನ್ಸಿಕಾ ಗೆ ನನ್ನ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ರಾಕ ಲೈನ್ ವೆಂಕಟೇಶ್ ಚಿತ್ರ ನಿರ್ಮಿಸುತ್ತಿದ್ದಾರೆ. ಇದೊಂದು ಬಿಗ್ ಬಜೆಟ್ ಚಿತ್ರವಾಗಿದ್ದು, ಮೋಹನ್ ಲಾಲ್ ಇರುವ ದೃಶ್ಯಗಳಿಗೆ ಸ್ಪೆಷಲ್ ಎಫೆಕ್ಟ್ ನಿಂದ ಕೂಡಿರುತ್ತದೆ ಎಂದು ಉನ್ನಿಕೃಷ್ಣನ್ ಹೇಳಿದ್ದಾರೆ.
ಹಿಂದಿಯ ಭಜರಂಗಿ ಬಾಯಿಜಾನ್ ತಮಿಳಿನ ಲಿಂಗ ಚಿತ್ರಗಳನ್ನು ನಿರ್ಮಿಸಿರುವ ರಾಕ್ ಲೈನ್ ವೆಂಕಟೇಶ್ ಈ ಪ್ರಾಜೆಕ್ಟ್ ಕೂಡ ಅತ್ಯದ್ಭುತವಾಗಿ ನಿರ್ಮಿಸಲಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.