ಲೀಡರ್ ಚಿತ್ರ ತಂಡ 
ಸಿನಿಮಾ ಸುದ್ದಿ

ಕಠಿಣ ಪರಿಸ್ಥಿತಿಯಲ್ಲೂ ಕಾಶ್ಮೀರದಲ್ಲಿ ಲೀಡರ್ ಚಿತ್ರದ ಶೂಟಿಂಗ್!

ಶಿವರಾಜ್ ಕುಮಾರ್ ನಟನೆಯ ಲೀಡರ್ ಚಿತ್ರದ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ಸಾಗಿದೆ. ಚಿತ್ರದಲ್ಲಿ ಶಿವಣ್ಣ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ...

ಶಿವರಾಜ್ ಕುಮಾರ್ ನಟನೆಯ ಲೀಡರ್ ಚಿತ್ರದ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ಸಾಗಿದೆ. ಚಿತ್ರದಲ್ಲಿ ಶಿವಣ್ಣ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ.

ಕಾಶ್ಮೀರದ ಹಿಮಪಾತವಾಗುತ್ತಿದ್ದು ಇಂತಹ ಸ್ಥಳಗಳಲ್ಲಿ ಲೀಡರ್ ಚಿತ್ರದ ಚಿತ್ರೀಕರಣ ಮಾಡುವುದು ಚಿತ್ರತಂಡಕ್ಕೆ ಸವಾಲಿನ ಕೆಲಸವಾಗಿದೆ ಎಂದು ನಿರ್ದೇಶಕ ನರಸಿಂಹ ಹೇಳಿದ್ದಾರೆ.

ಕಾಶ್ಮೀರದಲ್ಲಿನ ಅಶಾಂತಿ ಬಗ್ಗೆ ಓದಿ ತಿಳಿದುಕೊಂಡಿದ್ದ ನಮಗೆ ಇಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ದಂಗಾಗಿದ್ದೇವೆ. ಪೊಲೀಸರ ನೆರವಿನೊಂದಿಗೆ ನಾವು ಚಿತ್ರೀಕರಣ ಮಾಡುತ್ತಿದ್ದೇವೆ. ಆದರೆ ನಮಗೆ ನಿಜವಾದ ಶತ್ರು ಎಂದರೇ ಅದು ವಾತಾವರಣ. ಇಲ್ಲಿನ ವಾತಾವರಣ -14 ಡಿಗ್ರಿ ಸೆಲ್ಷಿಯಸ್ ಇದ್ದು ಹಿಮಪಾತ ಸಂಭವಿಸುತ್ತಿದೆ ಎಂದರು.

ಶಿವರಾಜ್ ಕುಮಾರ್ ಆರ್ಮಿ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ವಿಜಯ್ ರಾಘವೇಂದ್ರ, ಗುರುರಾಜ್ ಜಗ್ಗೇಶ್ ಮುಂತಾದವರಿದ್ದಾರೆ. ಶಿವಣ್ಣನಿಗೆ ನಾಯಕಿಯಾಗಿ ಪ್ರಣೀತಾ ನಟಿಸಿದ್ದಾರೆ. ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನಿರ್ದೇಶಿಸಿದ್ದು, ತರುಣ್ ಶಿವಪ್ಪ ಮತ್ತು ಹಾರ್ದಿಕ್ ಗೌಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್