ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ರಾಜಕುಮಾರ ಚಿತ್ರದ ಮೊದಲ ಹಾಡು ಫೆಬ್ರವರಿ 17ರಂದು ಬಿಡುಗಡೆಯಾಗಲಿದೆ.
ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ದೇಶನದ ಚಿತ್ರ ಇದಾಗಿದ್ದು, ಪುನೀತ್ ಅವರ ಇಂಟ್ರೋಡಕ್ಷನ್ ಸಾಂಗ್ ಇದಾಗಿರಲಿದೆ. ಮೊದಲು ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವ ಪ್ಲಾನ್ ಚಿತ್ರತಂಡದ್ದು. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದಾರೆ.
ಸಂತೋಷ್ ಆನಂದ್ ರಾಮ್ ಅವರೇ ಬರೆದಿರುವ ಯಾರಿವನು ಕನ್ನಡದವನು ಎಂಬ ಪದದಿಂದ ಸಾಹಿತ್ಯ ಶುರವಾಗುತ್ತದೆ. ಈ ಹಾಡನ್ನು ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್ ಹಾಡಿದ್ದಾರೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ನಂತರ ಬಿಡುಗಡೆಯಾಗಲಿದೆ. ಚಿತ್ರ ಮಾರ್ಚ್ ಕೊನೇ ವಾರದಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿ ಚಿತ್ರತಂಡವಿದೆ.