ಕೊಚ್ಚಿ: ದಕ್ಷಿಣ ಭಾರತದ ಪ್ರಸಿದ್ದ ನಟಿ ಭಾವನಾ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಟಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಕೊಚ್ಚಿ ಪೊಲೀಸರು 7 ಮಂದಿಯ ಪೈಕಿ ಇದುವರೆಗೂ ಮೂವರನ್ನು ಬಂಧಿಸಿದ್ದಾರೆ
ಭಾವನಾ ಅವರ ಮಾಜಿ ಕಾರು ಚಾಲಕ ಮಾರ್ಟಿನ್ ನನ್ನು ಶನಿವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್ನಿಂದ ಎರ್ನಾರಕುಳಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ಭಾವನಾ ಅವರನ್ನು ಕಾರಿನಲ್ಲೇ ಬಿಟ್ಟು ಪರಾರಿಯಾಗಿದ್ದರು.
ನಂತರ ಭಾವನಾ ನಿರ್ದೇಶಕರೊಬ್ಬ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.