ನಟಿಯ ಕಾರನ್ನು ಪರಿಶೀಲಿಸುತ್ತಿರುವ ಪೊಲೀಸರು 
ಸಿನಿಮಾ ಸುದ್ದಿ

ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೊಚ್ಚಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಇಂದು ವಶಕ್ಕೆ ..

ಕೊಚ್ಚಿ: ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೊಚ್ಚಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಪಲಕ್ಕಾಡ್ ನಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣದ ಮಾಸ್ಟರ್ ಮೈಂಡ್ ಪಲ್ಸರ್ ಸುನಿಗಾಗಿ ಶೋಧ ಮುಂದುವರಿಸಿದ್ದಾರೆ. ಮತ್ತೊಬ್ಬ ಆರೋಪಿ ವಾಗೀಶ್ ಎಂಬಾತನಿಗೂ ಪೊಲೀಸರು ಬಲೆ ಬೀಸಿದ್ದಾರೆ.

ಕೊಚ್ಚಿಯಿಂದ 144 ಕಿಮೀ ದೂರದಲ್ಲಿರುವ ಪಲಕ್ಕಾಡ್ ನಲ್ಲಿ ಮಣಿಕಂಡನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ, ಮಣಿಕಂಡನ್ ಎರ್ನಾಕುಲಂ ಸಮೀಪದ ತಮ್ಮನಂ ಎಂಬ ಗ್ರಾಮದವನು. ಈತ ಸುನಿ ಮತ್ತು ವಾಗೀಶ್ ಜೊತೆ ಕೇರಳ ಹೈಕೋರ್ಟ್ ನಲ್ಲಿ  ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.  

ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣವನ್ನು ಮಾರ್ಚ್ 3 ಕ್ಕೆ ಮುಂದೂಡಿದೆ. ಇನ್ನೂ ನಟಿಯಿದ್ದ ಕಾರಿನಿಂದ  ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ಪೊಲೀಸರು ಇದುವರೆಗೂ ವಡಿವಾಲ್ ಸಲೀಮ್, ಪ್ರದೀಪ್, ಮಾರ್ಟಿನ್ ಮತ್ತು ವಾಗೀಶ್ ಎಂಬ ನಾಲ್ಕು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನಟಿಗೆ ಕರೆ ಮಾಡಿ ಮಾತನಾಡಿದ್ದಾರೆ, ಫೆಬ್ರವರಿ 17ರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ  ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT