ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

'ನಾನು ಯಾವತ್ತು ಹೆದರಲ್ಲ': ಅಪಹರಣ, ಲೈಂಗಿಕ ದೌರ್ಜನ್ಯದ ಬಗ್ಗೆ ಮೌನ ಮುರಿದ ನಟಿ

ದಕ್ಷಿಣ ಭಾರತದ ಖ್ಯಾತ ನಟಿ ಇತ್ತೀಚಿಗೆ ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಗಾಗಿ ಚಲಿಸುವ ಕಾರಿನಲ್ಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ...

ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟಿ ಇತ್ತೀಚಿಗೆ ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಗಾಗಿ ಚಲಿಸುವ ಕಾರಿನಲ್ಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ ಆಘಾತದಿಂದ ಹೊರಬಂದಿದ್ದು, ಘಟನೆ ನಂತರ ಇದೇ ಮೊದಲ ಬಾರಿಗೆ ಮೌನ ಮುರಿದು ಮಾತನಾಡಿದ್ದಾರೆ.
'ಜೀವನದಲ್ಲಿ ಕೆಲವು ಬಾರಿ ಕೆಳಗೆ ಬಿದ್ದಿದ್ದೇನೆ. ಅಂತಹ ಘಟನೆಗಳು ನನ್ನ ಜೀವನದಲ್ಲಿ ಮತ್ತೆ ಮರುಕಳಿಸದಿರಲಿ. ಹಲವು ಬಾರಿ ವೈಫಲ್ಯಗಳನ್ನು ಕಂಡಿದ್ದೇನೆ ಮತ್ತು ನೋವು ಅನುಭವಿಸಿದ್ದೇನೆ. ಆದರೆ ಒಂದು ವಿಚಾರ ಅದ್ಯಾವುದಕ್ಕೂ ನಾನು ಹೆದರುವುದಿಲ್ಲ. ನನಗೆ ಎದುರಾಗುವ ಎಲ್ಲಾ ಸವಾಲು, ಸಮಸ್ಯೆಯನ್ನು ಧೈರ್ಯದಿಂದ ಎದುರಿಸುತ್ತೇನೆ' ಎಂದು ತಮ್ಮ ಇನ್ಸ್ಟಾ ಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
ತಮ್ಮ ಜೀವನದಲ್ಲಿ ನಡೆದ ಅತ್ಯಂತ ಕಹಿ ಘಟನೆಯನ್ನು ಮೆಟ್ಟಿ ನಿಂತ ನಟಿ ಎರಡು ದಿನಗಳ ಹಿಂದಷ್ಟೇ ಶೂಟಿಂಗ್ ಸ್ಥಳಕ್ಕೆ ತೆರಳಿ ನೂತನ ಚಿತ್ರದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಸಹ ನಟ ಪೃಥ್ವಿರಾಜ್ ಅವರು ತಮ್ಮ ಫೇಸ್ಬುಕ್`ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ನಟಿಯ ಧೈರ್ಯವನ್ನೂ ಶ್ಲಾಘಿಸಿದ್ದಾರೆ.
ನಟಿಯ ಧೈರ್ಯವನ್ನು ಮೆಚ್ಚಿರುವ ಕೇರಳ ಚಿತ್ರರಂಗ ಆಕೆಯ ಬೆಂಬಲಕ್ಕೆ ನಿಂತಿದೆ. ನಟ ಪೃಥ್ವಿರಾಜ್, ಅಂಜಲಿ ಮೆನನ್, ಮಂಜು ವಾರಿಯರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ನಟಿಯ ಬೆಂಬಲಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಜಾಗೃತಿ ಮೂಡಿಸಿದ್ದಾರೆ.
ಫೆ.17ರಂದು ನಟಿಯನ್ನು ಅಪಹರಣ ಮಾಡಿದ್ದ ದುಷ್ಕರ್ಮಿಗಳು ಚಲಿಸುವ ಕಾರಿನಲ್ಲೇ ಸುಮಾರು ಎರಡು ಗಂಟೆಗಳ ಕಾಲ ಲೈಂಗಿಕ ಕಿರುಕುಳ ನೀಡಿದ್ದರು. ಈ ಸಂಬಂಧ ಕೇರಳ ಪೊಲೀಸರು ಪ್ರಮುಖ ಆರೋಪಿ ಪಲ್ಸರ್ ಸುನಿ ಹಾಗೂ ಆತನ ಐವರು ಸಹಚರರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!