ಬಾಲಿವುಡ್ ನಟ ಅಮಿರ್ ಖಾನ್ 
ಸಿನಿಮಾ ಸುದ್ದಿ

ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ಅಮಿರ್ ಖಾನ್ ತೀವ್ರ ಖಂಡನೆ

ಹೊಸ ವರ್ಷಾಚರಣೆ ವೇಳೆ ನಗರದ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಾಲಿವುಡ್ ನಟ ಅಮಿರ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ...

ಮುಂಬೈ: ಹೊಸ ವರ್ಷಾಚರಣೆ ವೇಳೆ ನಗರದ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಾಲಿವುಡ್ ನಟ ಅಮಿರ್ ಖಾನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಹಿಳೆಯರ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ನಿಜಕ್ಕೂ ಆಘಾತವನ್ನುಂಟು ಮಾಡಿದೆ. ಈ ರೀತಿಯ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ಅಪರಾಧ ಪ್ರಕರಣಗಳಿಂದಾಗಿ ದೇಶ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಸಿರುವ ಘಟನೆ ತೀವ್ರ ಅಸಮಾಧಾನವನ್ನು ತಂದಿದೆ. ಘಟನೆ ತೀವ್ರ ನೋವುಂಟು ಮಾಡಿದೆ. ನಮ್ಮ ದೇಶದಲ್ಲಿ ಈ ರೀತಿಯ ಘಟನೆಗಳು ನಡೆಸುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕಿದೆ. ಈ ರೀತಿಯ ಸಮಸ್ಯೆಗಳಿಗೆ ಯಾವುದೇ ಪರಿಹಾರಗಳಿಲ್ಲ.

ಮಹಿಳೆಯ ಮೇಲಿನ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದರೆ, ಕಠಿಣ ಕಾನೂನನ್ನು ಪಾಲನೆ ಮಾಡಬೇಕಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಆರೋಪಿಗಳ ವಿರುದ್ಧ ಶೀಘ್ರಗತಿಯಲ್ಲಿ ಶಿಕ್ಷೆ ನೀಡುವ ಅಗತ್ಯವಿದ. ನಮ್ಮ ಕಾನೂನು ಅತ್ಯಂತ ಕಠಿಣವಾಗಬೇಕಿದೆ. ಈ ರೀತಿಯ ಘಟನೆಗಳು ಅಮೆರಿಕದಲ್ಲಿ ನಡೆದರೆ ಆರೋಪಿಗಳಿಗೆ 2-3 ತಿಂಗಳಿನಲ್ಲಿ ಶಿಕ್ಷೆಯಾಗುತ್ತದೆ ಹಾಗೂ ಪ್ರಕರಣವನ್ನು ಅಲ್ಲಿಗೆ ಮುಚ್ಚಿಹಾಕುತ್ತಾರೆ. ಆದರೆ, ಇಲ್ಲಿನ ಪರಿಸ್ಥಿತಿಯೇ ಬೇರೆಯಾಗಿದೆ. ಮಹಿಳೆಯ ಮೇಲೆ ದೌರ್ಜನ್ಯವೆಸಗಿದ ಬಳಿಕ ಜನರು ಏನೂ ಆಗುವುದಿಲ್ಲ ಎಂದು ತಿಳಿಯುತ್ತಾರೆ. ಇಂತಹ ಜನರಿಗೆ ಉದಾಹರಣೆಯಾಗುವಂತರ ಕಠಿಣ ನಿರ್ಧಾರ ಹಾಗೂ ಕಾನೂನನ್ನು ಸರ್ಕಾರ ಜಾರಿಗೆ ತರಬೇಕಿದೆ. ತಪ್ಪಿತಸ್ಥರಿಗೆ ಶೀಘ್ರಗತಿಯಲ್ಲಿ ಶಿಕ್ಷೆ ನೀಡಿ ಜೈಲಿಗೆ ಹಾಕಬೇಕು. ಆಗ, ನಮ್ಮ ದೇಶದಲ್ಲಿನ ಪರಿಸ್ಥಿತಿ ಬದಲಾಗುತ್ತದೆ. ಅಪರಾಧ ಮಾಡುವುದಕ್ಕೂ ಮುನ್ನ ಜನರು ಹೆದರುತ್ತಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT