ಮೋಹನ್ ಲಾಲ್ 
ಸಿನಿಮಾ ಸುದ್ದಿ

600 ಕೋಟಿ ರು ಬಜೆಟ್ ಸಿನಿಮಾದಲ್ಲಿ ಮೋಹನ್ ಲಾಲ್ ನಟನೆ

ಮಲಯಾಳಂ ಸಿನಿಮಾ ರಂಗದಲ್ಲಿ ಮೂರು ದಶಕಗಳ ಕಾಲ ಸೂಪರ್ ಸ್ಟಾರ್ ಆಗಿ ಮೆರೆದಿದ್ದ ಖ್ಯಾತ ನಟ ಮೋಹನ್ ಲಾಲ್ ಅವರು ಸಿನಿ ವೃತ್ತಿ ಬದುಕಿನಿಂದ ...

ಹೈದರಾಬಾದ್: ಮಲಯಾಳಂ ಸಿನಿಮಾ ರಂಗದಲ್ಲಿ ಮೂರು ದಶಕಗಳ ಕಾಲ ಸೂಪರ್ ಸ್ಟಾರ್ ಆಗಿ ಮೆರೆದಿದ್ದ ಖ್ಯಾತ ನಟ ಮೋಹನ್ ಲಾಲ್ ಅವರು ಸಿನಿ ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಲಿದ್ದಾರೆ ಎಂದು ಹೇಳಲಾಗಿದೆ.

ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾವೇ ಮೋಹನ್ ಲಾಲ್ ವೃತ್ತಿ ಬದುಕಿನ ಕೊನೆಯ ಸಿನಿಮಾ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಕಾದಂಬರಿಕಾರ ಎಂ.ಟಿ. ವಾಸುದೇವ್‌ ನಾಯರ್ ವಿರಚಿತ "ರಂಡಮ್‌ ಓಝಾಮ್‌' ಕಾದಂಬರಿಯಾಧರಿತ ಚಿತ್ರ ಇದಾಗಿದೆ. ಈ ಚಿತ್ರ ಮುಂದಿನ ವರ್ಷ ಸೆಟ್ಟೇರಲಿದೆ.

ಮಾಲಿವುಡ್ ನಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಮೋಹನ್ ಲಾಲ್ ಹಿಂದಿ, ಕನ್ನಡ, ತಮಿಳು ಹಾಗೂ ತೆಲುಗು ಸಿನಿಮಾದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ.

ರಂಡಮ್‌ ಓಝಾಮ್‌' ಮಹಾಭಾರತದ ಭೀಮನಕಥೆಯನ್ನೊಳಗೊಂಡಿರುವ ಕಾದಂಬರಿಯಾಗಿದೆ. ಈ ಸಿನಿಮಾ ಜಗತ್ತನ್ನೇ ಬೆಚ್ಚಿಬೀಳಿಸಲಿದೆ ಅಂತೆ.

ಪದ್ಮಶ್ರೀ ಪ್ರಶಸ್ತಿ, ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು - ಎರಡು ಅತ್ಯುತ್ತಮ ನಟ ಪ್ರಶಸ್ತಿ ಸೇರಿದಂತೆ ಮೋಹನ್ ಲಾಲ್ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

SCROLL FOR NEXT