ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾಲಿವುಡ್ ನಟ ವಿಶಾಲ್ ಅವರು, ಇದೀಗ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ, ಅಲ್ಲದೆ, ತಮ್ಮ ಟ್ವಿಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ನಿನ್ನಯಷ್ಟೇ ನಟ ಎಂಜಿಆರ್ ಅವರ 100ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ವಿಶಾಲ್ ಅವರು, 'ಪೆಟಾ'ಗೆ ನಾನು ರಾಯಭಾರಿಯಾಗಿಲ್ಲ ಹಾಗೂ ಪೆಟಾಗೆ ನಾನು ಬೆಂಬಲಿಗನೂ ಅಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ನಿಷೇಧಿತ ಜಲ್ಲಿಕಟ್ಟು ಕ್ರೀಡೆಗೆ ಬೆಂಬಲ ವ್ಯಕ್ತಪಡಿಸಿರುವ ಅವರು, ಜಲ್ಲಿಕಟ್ಟು ಕ್ರೀಡೆ ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಜಲ್ಲಿಕಟ್ಟು ಕ್ರೀಡೆಗೆ ನಾನು ಎಂದಿಗೂ ಬೆಂಬಲವನ್ನು ವ್ಯಕ್ತಪಡಿಸುತ್ತೇನೆಂದು ತಿಳಿಸಿದ್ದಾರೆ.