ನಟ ಕಮಲ್ ಹಾಸನ್ 
ಸಿನಿಮಾ ಸುದ್ದಿ

ಪ್ರತಿಭಟನೆ ವೇಳೆ ಆಟೋಗೆ ಬೆಂಕಿ; ಪೊಲೀಸರ ಪಾತ್ರ ಪ್ರಶ್ನಿಸಿದ ನಟ ಕಮಲ್ ಹಾಸನ್

ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ಹಿಂಸಾಚಾರದಲ್ಲಿ ಪೊಲೀಸರ ಪಾತ್ರ ಕುರಿತಂತೆ ನಟ ಕಮಲ್ ಹಾಸನ್...

ಚೆನ್ನೈ: ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದ್ದು, ಹಿಂಸಾಚಾರದಲ್ಲಿ ಪೊಲೀಸರ ಪಾತ್ರ ಕುರಿತಂತೆ ನಟ ಕಮಲ್ ಹಾಸನ್ ಅವರು ಮಂಗಳವಾರ ಸ್ಪಷ್ಟನೆ ಕೇಳಿದ್ದಾರೆ.

ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಕೇವಲ ಸಾಮಾಜಿಕ  ಜಾಲತಾಣಗಳಲ್ಲಿ ಅಷ್ಟೇ ಅಲ್ಲದೇ ಮಾಧ್ಯಮಗಳಲ್ಲೂ ಈ ವಿಡಿಯೋ ವ್ಯಾಪಕವಾಗಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಪೊಲೀಸರ ಕೃತ್ಯಕ್ಕೆ ಎಲ್ಲಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಕಮಲ್ ಹಾಸನ್ ಅವರು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ಪೊಲೀಸರ ಪಾತ್ರ ಕೇಳಿಬಂದಿದೆ. ಪ್ರತಿಭಟನೆ ಮಹಿಳೆಯರು ಹಾಗೂ ಮಕ್ಕಳ ಮೇಲೂ ಪರಿಣಾಮಗಳನ್ನು ಬೀರಿದ್ದು, ಕೂಡಲೇ ಪೊಲೀಸರು ಸೂಕ್ತ ರೀತಿಯ ಸ್ಪಷ್ಟನೆಯನ್ನು ನೀಡಬೇಕಿದೆ ಎಂದು ಹೇಳಿದ್ದಾರೆ.

ಜಲ್ಲಿಕಟ್ಟು ಪ್ರತಿಭಟನೆಯನ್ನು ನೇತಾರರಿಲ್ಲದ ಪ್ರತಿಭಟನೆ ಎಂದು ಹೇಳುವ ಮೂಲಕ ಕೆಲವರು ಹಾಸ್ಯ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಯಾವುದೇ ರೀತಿಯ ಆಕ್ರೋಶಭರಿತ ಹೇಳಿಕೆಯನ್ನು ನೀಡಲು ಇಚ್ಛಿಸುವುದಿಲ್ಲ. ಪ್ರತಿಭಟನೆ ನ್ಯಾಯಸಮ್ಮತವಾಗಿತ್ತು. ನ್ಯಾಯಸಮ್ಮತವಾಗಿರದಿದ್ದರೆ ಅಷ್ಟೊಂದು ಸಂಖ್ಯೆಯಲ್ಲಿ ಜನರು ಸೇರಲು ಸಾಧ್ಯವಾಗುತ್ತಿರಲಿಲ್ಲ.

ಜಲ್ಲಿಕಟ್ಟು ಕ್ರೀಡೆ ಮೇಲೆ ನಿಷೇಧವನ್ನು ಹೇರಬಾರದು. ಕ್ರೀಡೆಗೆ ಅದರದ್ದೇ ಆದ ಕಟ್ಟುಪಾಡುಗಳಿದ್ದು ಅವುಗಳನ್ನು ಪಾಲಿಸಬೇಕು. ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಬೇಕೆಂದು ಕಳೆದ 20 ವರ್ಷಗಳಿಂದಲೂ ನಾವು ಪ್ರತಿಭಟನೆಯನ್ನು ನಡೆಸುತ್ತಲೇ ಬಂದಿದ್ದೇವೆ. ಸರ್ಕಾರದ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸುತ್ತಿದ್ದೇವೆ. ಕ್ರೀಡೆ ಬಗ್ಗೆ ಸರ್ಕಾರ ದ್ವಿಮುಖ ಧೋರಣೆ ತೋರುತ್ತಿದ್ದು, ಜಲ್ಲಿಕಟ್ಟು ಕುರಿತ ಕಾನೂನಿನ ವಿರುದ್ಧ ನಾವು ಸಾಕಷ್ಟು ವರ್ಷಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ