ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಬಾಲಿವುಡ್ ಆಯ್ತು, ಈಗ ಹಾಲಿವುಡ್ ಚಿತ್ರದಲ್ಲಿ ಕಿಚ್ಚಾ ಸುದೀಪ್ ನಟನೆ?

ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬ ಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7  ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.

ಅಂತೆಯೇ ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್  ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ  ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!