ಬೆಂಗಳೂರು: ರಾಜಾಜಿನಗರ ವಿಧಾನಸಭೆ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಾರೆ ಎಂಬ ಎಲ್ಲಾ ಊಹಾ ಪೋಹಗಳಿಗೆ ತೆರೆ ಹೇಳಿದಿರುವ ಅವರು, ನನಗೆ ರಾಜಕೀಯಕ್ಕೆ ಬರುವುದು ಇಷ್ಟವಿಲ್ಲ ಎಂದು ಹೇಳಿದ್ದಾರೆ.
ನಾನು ರಾಜಕೀಯಕ್ಕೆ ಬರುತ್ತೇನೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ ಶಿವರಾಜ್ ಕುಮಾರ್, ಅಮ್ಮನ ಬಗ್ಗೆ ಅಭಿಮಾನವಿದ್ದ ಕಾರಣ ರಾಹುಲ್ ಗಾಂಧಿ ನಮಗೆ ಸಾಂತ್ವನ ಹೇಳಲು ನಮ್ಮ ಮನೆಗೆ ಬಂದಿದ್ದರು. ರಾಹುಲ್ ಗಾಂಧಿ ನಮ್ಮ ಮನೆಗೆ ಬಂದಿದ್ದರು ಎಂದಾಕ್ಷಣ ಶಿವರಾಜ್‌ಕುಮಾರ್ ರಾಜಕಾರಣಕ್ಕೆ ಬರುತ್ತಾರೆ ಎನ್ನುವುದು ಸರಿಯಲ್ಲ. ನಾನು ಕಾಂಗ್ರೆಸ್ ಸೇರುತ್ತೇನೆ ಎಂಬ ಉಹಾಪೋಹಗಳೂ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಗೀತಾ ಶಿವರಾಜ್‌ಕುಮಾರ್ ಸಮಾಜ ಸೇವೆ ಮಾಡುತ್ತಿದ್ದಾರೆ. ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ಯಾವ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.