ಚೆನ್ನೈ: ಈ ದೇಶದಲ್ಲಿ ಕ್ರಿಕೆಟ್ ನಂತೆಯೇ 'ಬಿಗ್ ಬಾಸ್' ರಿಯಾಲಿಟಿ ಶೋ ಕೂಡ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಖ್ಯಾತ ನಟ ಕಮಲ್ ಹಾಸನ್ ಅವರು ಹೇಳಿದ್ದಾರೆ.
ತಮಿಳಿನಲ್ಲಿ ಪ್ರಸಾರವಾಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ನಟ ಕಮಲ್ ಹಾಸನ್ ಅವರು, ತಮಿಳುನಾಡು ಜನರ ಭಾವನೆಗಳಿಗೆ ಧಕ್ಕೆ ಬರುವಂತೆ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿರುವ ಹಿಂದೂ ಮಕ್ಕಳ್ ಕಚ್ಚಿ ಪಕ್ಷ ಸೇರಿದಂತೆ ಹಲವಾರು ಸಂಘಟನೆಗಳು, ಕೂಡಲೇ ಕಮಲ್ ಹಾಸನ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸುತ್ತಿವೆ.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಮಲ್ ಹಾಸನ್ ಅವರು, ನನ್ನ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ. ಜಿಎಸ್'ಟಿ ಬಗ್ಗೆ ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದಲ್ಲಿ ಕ್ರಿಕೆಟ್ ನಂತೆಯೇ 'ಬಿಗ್ ಬಾಸ್' ರಿಯಾಲಿಟಿ ಶೋ ಕೂಡ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ನನ್ನ ವೃತ್ತಿ ಎಷ್ಟು ಕಠಿಣವಾಗಿರುತ್ತದೆ ಎಂಬುದು ನಿಮಗೆ ತಿಳಿದಿರುವ ವಿಚಾರ. ದಶಾವತಾರಂ ಚಿತ್ರದ ಬಳಿ ಜನರು ನನ್ನನ್ನು ಹೆಚ್ಚು ಇಷ್ಟಪಟ್ಟಿದ್ದರು. ಇದೀಗ ಅಂತಹ ಜನ ನನ್ನ ವಿರುದ್ಧವೇಕೆ ನಿಲ್ಲುತ್ತಾರೆ. ಬಿಗ್ ಬಾಸ್ ರಿಯಾಲಿಟಿ ಶೋ ಹೆಚ್ಚು ವಿವಾದವನ್ನು ಸೃಷ್ಟಿಸುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics