ಒಂದು ಮೊಟ್ಟೆ ಕಥೆ ಚಿತ್ರದ ಫೋಟೋ 
ಸಿನಿಮಾ ಸುದ್ದಿ

ಒಂದು ಮೊಟ್ಟೆ ಕಥೆ ಚಿತ್ರದ ರಿಮೇಕ್ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್!

ಸ್ಯಾಂಡಲ್ವುಡ್ ನಲ್ಲಿ ಕಳೆದ ವಾರ ಬಿಡುಗಡೆಯಾಗಿದ್ದ ಒಂದು ಮೊಟ್ಟೆ ಕಥೆ ಚಿತ್ರಕ್ಕೆ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಇದೀಗ ಚಿತ್ರದ ರಿಮೇಕ್...

ಸ್ಯಾಂಡಲ್ವುಡ್ ನಲ್ಲಿ ಕಳೆದ ವಾರ ಬಿಡುಗಡೆಯಾಗಿದ್ದ ಒಂದು ಮೊಟ್ಟೆ ಕಥೆ ಚಿತ್ರಕ್ಕೆ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಇದೀಗ ಚಿತ್ರದ ರಿಮೇಕ್ ಹಕ್ಕುಗಳಿಗೆ ಬೇಡಿಕೆ ಹೆಚ್ಚಾಗಿದೆ. 
ಕಡಿಮೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಒಂದು ಮೊಟ್ಟೆ ಕಥೆ ಚಿತ್ರ ಜನಪ್ರಿಯತೆ ಗಳಿಸಿದ್ದು ಇದೀಗ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಶೋಗಳನ್ನು ಹೆಚ್ಚಿಸಿಕೊಂಡಿದೆ. ಹೆಚ್ಚುವರಿ 25 ಚಿತ್ರಮಂದಿರಗಳನ್ನು ಹೆಚ್ಚಿಸಿಕೊಂಡಿದ್ದು ಒಟ್ಟಾರೆ 42 ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಇನ್ನು ಚಿತ್ರರಂಗ ಸ್ಟಾರ್ ನಟರಾದ ಪುನೀತ್ ರಾಜ್ ಕುಮಾರ್, ಗಣೇಶ್, ರಕ್ಷಿತ್ ಶೆಟ್ಟಿ ಮತ್ತು ರಿಶಭ್ ಶೆಟ್ಟಿ ಸೇರಿದಂತೆ ಹಲವರು ಚಿತ್ರವನ್ನು ನೋಡಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. 
ಇನ್ನು ಬೆಂಗಳೂರಿನ ಸಂಪಿಗೆ ಮತ್ತು ಶಾರದ ಚಿತ್ರಮಂದಿರಗಳಲ್ಲಿ ಹೆಚ್ಚಾಗಿ ತಮಿಳು ಚಿತ್ರಗಳು ಬಿಡುಗಡೆಯಾಗುತ್ತಿತ್ತು. ಒಂದು ಮೊಟ್ಟೆ ಕಥೆ ಚಿತ್ರದ ಯಶಸ್ಸಿನಿಂದಾಗಿ ಈ ಎರಡು ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆಯಾಗಿ ಉತ್ತಮ ಗಳಿಕೆ ಮಾಡುತ್ತಿದೆ. 
ಚಿತ್ರದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಚಿತ್ರವನ್ನು ತಮಿಳುನಾಡಿನ ಕೆಲ ಗಣ್ಯರಿಗೆ ಮತ್ತು ವಿತರಕರಿಗೆ ಚಿತ್ರವನ್ನು ತೋರಿಸಿದ್ದು ಅವರಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು ಕಾಲಿವುಡ್ ನಲ್ಲಿ ಚಿತ್ರವನ್ನು ರಿಮೇಕ್ ಮಾಡಲು ಬಯಸಿದ್ದಾರೆ ಎಂದು ನಿರ್ದೇಶಕರು ಖುಷಿ ಹಂಚಿಕೊಂಡಿದ್ದಾರೆ. 
ಚಿತ್ರವನ್ನು ಲೂಸಿಯಾ ಖ್ಯಾತಿಯ ಪವನ್ ಕುಮಾರ್ ನಿರ್ಮಿಸಿದ್ದು ನಿರ್ದೇಶಕ ರಾಜ್ ಬಿ ಶೆಟ್ಟಿ ಸಹ ಚಿತ್ರದಲ್ಲಿ ಒಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?