ಕಾವ್ಯ ಮಾಧವನ್ 
ಸಿನಿಮಾ ಸುದ್ದಿ

ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್ ಪತ್ನಿ ಕಾವ್ಯ ಮಾಧವನ್ ವಿಚಾರಣೆ

ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಅವರ ಪತ್ನಿ ಕಾವ್ಯ ಮಾಧವನ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು...

ಕೊಚ್ಚಿ: ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಅವರ ಪತ್ನಿ ಕಾವ್ಯ ಮಾಧವನ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಕಾವ್ಯ ಮಾಧವನ್ ಅವರನ್ನು ವಿಚಾರಣೆಗೊಳಪಡಿಸಿರುವುದನ್ನು ಪೊಲೀಸ್ ಅಧಿಕಾರಿ ಎ.ವಿ. ಜಾರ್ಜ್ ಅವರು ಖಚಿತಪಡಿಸಿದ್ದಾರೆ. 
ಕಾವ್ಯಾ ಮಾಧವನ್ ಅವರನ್ನು ವಿಚಾರಣೆಗೊಳಪಡಿಸಿದ್ದನ್ನು ನಾನು ಖಚಿತಪಡಿಸುತ್ತೇನೆ. ಆದರೆ, ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ಜಾರ್ಜ್ ಅವರು ಹೇಳಿದ್ದಾರೆ. 
ಮೂಲಗಳ ಪ್ರಕಾರ, ಪೊಲೀಸರು ಕಾವ್ಯ ಮಾಧವನ್ ಅವರನ್ನು ನಿನ್ನೆ ದಿಲೀಪ್ ಅವರ ಸ್ವಗೃಹದಲ್ಲಿಯೇ ವಿಚಾರಣೆಗೊಳಪಡಿಸಿದ್ದು, 6 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದಾರೆ, ವಿಚಾರಣೆ ವೇಳೆ ಕಾವ್ಯಾ ಅವರು ಹಲವು ಬಾರಿ ಕಣ್ಣೀರು ಹಾಕಿರುವುದಾಗಿ ತಿಳಿದುಬಂದಿದೆ. 
ಫೆ.17 ರಂದು ರಾತ್ರಿ 7.30 ರ ಸುಮಾರಿಗೆ ತ್ರಿಶೂರ್​ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಪ್ರಕರಣ ಸಂಬಂಧ 11ನೇ ಆರೋಪಿಯಾಗಿ ನಟ ದಿಲೀಪ್ ಅವರನ್ನು ಜುಲೈ.10 ರಂದು ಬಂಧನಕ್ಕೊಳಪಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

'ಮಿಯಾಸ್' ಜಗತ್ತನ್ನೇ ಆಳ್ತಾರೆ: ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಮುಗಿಬಿದ್ದ ಮುಸ್ಲಿಂ ನಾಯಕರು! Video

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video Viral

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ 'ಗಾಮೋಸಾ' ಧರಿಸದೆ ಈಶಾನ್ಯಕ್ಕೆ ಅಗೌರವ: ಅಮಿತ್ ಶಾ

SCROLL FOR NEXT