ಸ್ಯಾಂಡಲ್ವುಡ್ ನಟಿ ಸಂಗೀತಾ ಭಟ್ ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದು ಈ ಬಗ್ಗೆ ನಟಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಡೆಕ್ಕನ್ ಕ್ರಾನಿಕಲ್ ಪತ್ರಿಕೆ ವರದಿ ಮಾಡಿದೆ.
ಪ್ರೀತಿ ಗೀತಿ ಇತ್ಯಾದಿ, ಮಾಮು ಟೀ ಅಂಗಡಿ ಮತ್ತು ಎರಡನೇ ಸಲ ಚಿತ್ರದಲ್ಲಿ ನಟಿಸಿದ್ದಾರೆ. ಸಂಗೀತಾ ಭಟ್ ಅವರ ಇನ್ಸ್ಟಾಗ್ರಾಂಗೆ ಮಹಿಳಾ ಹೆಸರಿನ ಇನ್ಸ್ಟಾಗ್ರಾಂ ಅಕೌಂಟ್ ನಿಂದ ತಮ್ಮ ನಗ್ನ ಚಿತ್ರವನ್ನು ಕಳುಹಿಸುವಂತೆ ಸಂದೇಶವೊಂದನ್ನು ಕಳುಹಿಸಿದ್ದಾರೆ. ಸಂದೇಶದ ಜತೆಗೆ ನಟಿಯ ಬಿಕಿನಿ ಚಿತ್ರವನ್ನು ಹಾಕಿದ್ದಾರೆ. ಈ ಪೋಸ್ಟ್ ಅನ್ನು ನಟಿ ಸಂಗೀತಾ ಭಟ್ ಅವರು ಸ್ಕ್ರೀನ್ ಶಾಟ್ ತೆಗೆದುಕೊಂಡು ಫೇಸ್ ಬುಕ್ ನಲ್ಲಿ ತಮಗಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ.
ಈ ರೀತಿಯ ಸಂದೇಶ ಬಂದ ಕೂಡಲೇ ನಟಿ ಆ ಇನ್ಸ್ಟಾಗ್ರಾಂ ಅಕೌಂಟ್ ಅನ್ನು ಬ್ಲಾಕ್ ಮಾಡಿದ್ದಾರೆ. ಅದೇ ಹೆಸರಿನ ಅಕೌಂಟ್ ಫೇಸ್ ಬುಕ್ ನಲ್ಲಿ ಇದ್ದು ಇದು ಯುವತಿ ಅಕೌಂಟ್ ಆಗಿದೆ. ಒಬ್ಬ ಹೆಣ್ಣು ಮಗಳಾಗಿ ಮತ್ತೊಬ್ಬ ಹೆಣ್ಣು ಮಗಳಿಗೆ ಈ ರೀತಿಯ ಸಂದೇಶಗಳನ್ನು ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ನಟಿ... ಈ ಅಕೌಂಟ್ ನಿಜವೋ ಅಥವಾ ನಕಲಿಯೋ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಕಿರುಕುಳ ಬಗ್ಗೆ ನಟಿ ಬರೆದಿರುವ ಫೇಸ್ ಬುಕ್ ಪೋಸ್ಟ್ ಹಲವರು ಪ್ರತಿಕ್ರಿಯಿಸಿದ್ದು ಇಂತಹ ಘಟನೆಗಳನ್ನು ನಿರ್ಲಕ್ಷಿಸಿ ತಮ್ಮ ವೃತ್ತಿ ಜೀವನದ ಕಡೆ ಹೆಚ್ಚು ಗಮನ ಕೊಡುವಂತೆ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics