ನಟ ರಿಷಿ 
ಸಿನಿಮಾ ಸುದ್ದಿ

'ಕವಲು ದಾರಿ'ಯಲ್ಲಿ ಪೊಲೀಸ್ ಅಧಿಕಾರಿಯಾಗಿ ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ಹೇಮಂತ್ ರಾವ್ ಕವಲು ದಾರಿ...

ಬೆಂಗಳೂರು:  ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ಹೇಮಂತ್ ರಾವ್ ಕವಲು ದಾರಿ ಎಂಬ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್, ಕಾರ್ತಿಕ್ ಮತ್ತು ಕೆಆರ್ ಜಿ ಸ್ಟುಡಿಯೋಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. 
ಆಗಸ್ಟ್ ನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದ್ದು, ಆಪರೇಷನ್ ಅಲಮೇಲಮ್ಮ ಚಿತ್ರದ ನಾಯಕ ರಿಷಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಕವಲುದಾರಿ ಥ್ರಿಲ್ಲರ್ ಸಿನಿಮಾದಲ್ಲಿ ರಿಷಿ ಪೋಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಮಂತ್ ರಾವ್ ಹೇಳಿದ್ದಾರೆ.
ಅಪರೇಷನ್ ಅಲಮೇಲಮ್ಮ ಸಿನಿಮಾ ಟ್ರೇಲರ್ ನೋಡಿದ ಹೇಮಂತ್ ತಮ್ಮ ಕವಲು ದಾರಿ ಸಿನಿಮಾದ ಪೊಲೀಸ್ ಪಾತ್ರಕ್ಕೆ ರಿಷಿಯೇ ಸೂಕ್ತ ನಟ ಎಂದು ನಿರ್ಧರಿಸಿದ್ದರು. ಆಪರೇಷನ್ ಅಲಮೇಲಮ್ಮ ಸಿನಿಮಾದ ಪರ್ಮಿ ಪಾತ್ರ ನನ್ನನ್ನು ಬಹಳ ಇಂಪ್ರೆಸ್ ಮಾಡಿತ್ತು ಎಂದು ತಿಳಿಸಿದ್ದಾರೆ
ಕವಲು ದಾರಿ ಎಂದರೇ ಕ್ರಾಸ್ ರೋಡ್, ಪೊಲೀಸ್ ಅಧಿಕಾರಿಯೊಬ್ಬನ ಸತ್ಯ ಮತ್ತು ಸುಳ್ಳಿನ ನಡುವಿನ ಜೀವನದ ಕಥೆಯನ್ನೊಳಗೊಂಡ ಸಿನಿಮಾವಾಗಿದೆ, ಸಿನಿಮಾ ಗೆ ನಾಯಕಿ ಪಾತ್ರ ಇನ್ನೂ ಅಂತಿಮವಾಗಿಲ್ಲ. ಚಿತ್ರಕ್ಕೆ ಚರಣ್‍ರಾಜ್ ಸಂಗೀತ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT