ನಟ ದಿಲೀಪ್ 
ಸಿನಿಮಾ ಸುದ್ದಿ

ಮಲಯಾಳಂ ನಟಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಸುಳ್ಳುಪತ್ತೆ ಪರೀಕ್ಷೆಗೆ ಸಿದ್ಧ ಎಂದ ನಟ ದಿಲೀಪ್

ಮಲಯಾಳಂ ಪ್ರಸಿದ್ಧ ನಟಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ಕೇಳಿ ಬಂದಿರುವ ನಟ ...

ಕೊಚ್ಚಿ: ಮಲಯಾಳಂ ಪ್ರಸಿದ್ಧ ನಟಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ಕೇಳಿ ಬಂದಿರುವ ನಟ ದಿಲೀಪ್ ತಾವು ಸುಳ್ಳು ಪತ್ತೆ ಪರೀಕ್ಷೆಗೆ ಸಿದ್ದವಿರುವುದಾಗಿ ನಟ ದಿಲೀಪ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ.
ಪ್ರಕರಣದಲ್ಲಿ ತಮ್ಮ ಹೆಸರನ್ನು ಅನಾವಶ್ಯಕವಾಗಿ ಎಳೆದು ತರಲಾಗುತ್ತಿದೆ, ತಾನು ಮುಗ್ಧ ಎಂದು ಹೇಳಿಕೊಂಡಿರುವ ದಿಲೀಪ್ ಅದನ್ನು ಸಾಬೀತು ಪಡಿಸಲು ಸುಳ್ಳು ಪತ್ತೆ ಪರೀಕ್ಷೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ. ತಮಗೆ ಬೆಂಬಲ ಸೂಚಿಸಿದ ನಟರಾದ ಸಲೀಂ ಕುಮಾರ್ ಮತ್ತು ಅಜು ವಾರ್ಗೀಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಒಂದು ಹೆಸರಿನಲ್ಲಿ ಕಳೆದ ಕೆಲವು ದಿನಗಳಿಂದ ನನ್ನ ಮಾನಹಾನಿಗೆ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚು ನಡೆಸುತ್ತಿದ್ದಾರೆ. ಪ್ರಮುಖ ಚಾನೆಲ್ ಗಳಲ್ಲಿಯೂ ನನ್ನನ್ನು ಅವಹೇಳನಕಾರಿಯಾಗಿ ಚಿತ್ರಿಸಲು ಯತ್ನಿಸಲಾಗುತ್ತಿದೆ.
ನನ್ನನ್ನು ಪ್ರೀತಿಸುವ ಪ್ರೇಕ್ಷಕರಿಂದ ನನ್ನನ್ನು ದೂರ ಮಾಡುವುದು ಇವರ ಪ್ರಮುಖ ಉದ್ದೇಶವಾಗಿದೆ. ನನ್ನ ಮುಂದಿನ ಹೊಸ ಚಿತ್ರಗಳಾದ ರಾಮ್ ಲೀಲಾ ಮತ್ತು ಇತರ ಸಿನಿಮಾಗಳನ್ನು ವಿಫಲಗೊಳಿಸಲು ಪ್ರಯತ್ನಿಸಲಾಗುತ್ತಿದೆ. ನನ್ನ ರಕ್ತಕ್ಕಾಗಿ ಹಾ ತೊರೆಯುವವರೊಂದಿಗೆ, ಮಾಧ್ಯಮಗಳೊಂದಿಗೆ, ಸಾರ್ವಜನಿಕರೊಂದಿಗೆ, ನಾನು ಯಾವ ಕೇಸಿನಲ್ಲಿಯೂ ಶಾಮೀಲಾಗಿಲ್ಲ ಎಂದು ಹೇಳಲು ಇಚ್ಛಿಸುತ್ತೇನೆ.ಬ್ರೈನ್ ಮ್ಯಾಪಿಂಗ್ , ಸುಳ್ಳು ಪತ್ತೆ ಪರೀಕ್ಷೆ ಯಾವುದೇ ಇರಲಿ, ಎಲ್ಲದಕ್ಕೂ ನಾನು ಸಿದ್ಧವಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT