ಫೇಸ್ ಬುಕ್ ಚಿತ್ರ 
ಸಿನಿಮಾ ಸುದ್ದಿ

ಶಿವಣ್ಣನ ಮನೆಗೆ ತೆಲುಗು ನಟ ಬಾಲಕೃಷ್ಣ ಭೇಟಿ!

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಸೋಮವಾರ ವರನಟ ಡಾ.ರಾಜ್ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಿದರು.

ಬೆಂಗಳೂರು: ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ  ಅವರು ಸೋಮವಾರ ವರನಟ ಡಾ.ರಾಜ್ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಿದರು.

ನಗರದ ನಾಗವಾರದಲ್ಲಿರುವ ಶಿವರಾಜ್‌ ಕುಮಾರ್‌ ನಿವಾಸಕ್ಕೆ ಬೆಳಗ್ಗೆ ಆಗಮಿಸಿದ ಬಾಲಕೃಷ್ಣ ಅವರು ಇಡೀ ರಾಜ್ ಕುಟುಂಬವನ್ನು ಭೇಟಿ ಮಾಡಿ ಚರ್ಚಿಸಿದರು. ಇದೇ ವೇಳೆ ಇತ್ತೀಚಿಗೆ ನಿಧನರಾದ ದಿ.ಪಾರ್ವತಮ್ಮ ರಾಜ್  ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಂತಾಪ ಸೂಚಿಸಿದರು. ಈ ವೇಳೆ ಶಿವರಾಜ್‌ ಕುಮಾರ್‌, ಗೀತಾ ಶಿವರಾಜ್‌ ಕುಮಾರ್‌ ಹಾಗೂ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌ ಹಾಜರಿದ್ದರು. ಅಂತೆಯೇ ನಟ  ಬಾಲಕೃಷ್ಣ ಅವರು ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರನ್ನು ಕೂಡ ಭೇಟಿ ಮಾಡಿದ್ದು, ಬಾಲಕೃಷ್ಣ ಅವರ ಭೇಟಿಯ ಫೋಟೋಗಳನ್ನು ಸಾಗರ್ ಮನಸು ಎಂಬುವವರು ತಮ್ಮ ಫೇಸ್ ಬುಕ್ ವಾಲ್  ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಲವು ವರ್ಷಗಳಿಂದಲೂ ರಾಜ್ ಕುಟುಂಬ ಹಾಗೂ ಬಾಲಕೃಷ್ಣ ಕುಟುಂಬದ ನಡುವೆ ಉತ್ತಮ ಬಾಂಧವ್ಯವಿದ್ದು, ಅವರು ಬೆಂಗಳೂರಿಗೆ ಬಂದಾಗೆಲ್ಲ ಶಿವರಾಜ್‌ ಕುಮಾರ್‌ ಅವರನ್ನು ಭೇಟಿ ಮಾಡುವುದು ಮಾಮೂಲು. ಅಷ್ಟೇ ಅಲ್ಲ,  ತೆಲುಗಿನ ‘ಗೌತಮಿ ಪುತ್ರ ಶಾತಕರ್ಣಿ' ಚಿತ್ರದಲ್ಲಿ ಇಬ್ಬರೂ ನಟರು ಒಟ್ಟಿಗೆ ಅಭಿನಯಿಸಿದ್ದರು. ಈ ಭೇಟಿ ಸಂದರ್ಭದಲ್ಲಿ ಮಾತನಾಡಿದ ಬಾಲಕೃಷ್ಣ, ‘ತಾಯಿ ಸಮಾನರಾದ ಪಾರ್ವತಮ್ಮ ರಾಜ್‌ಕುಮಾರ್‌ ನಿಧನ ಅತೀವ ದುಃಖ  ತಂದಿದೆ. ಕಾರಣಾಂತರಗಳಿಂದ ಅವರ ಅಂತಿಮ ದರ್ಶನ ಪಡೆಯುವುದಕ್ಕೆ ಸಾಧ್ಯವಾಗಿರಲಿಲ್ಲ' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!