'ಡೇಂಜರ್ ಝೋನ್' ಸಿನಿಮಾ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

'ಡೇಂಜರ್ ಝೋನ್' ಸಿನಿಮಾ ಸಹ ನಿರ್ಮಾಪಕನಿಂದ ಯುವಕನ ಹತ್ಯೆ, ಮೂವರಿಗೆ ಗಾಯ

'ಡೇಂಜರ್ ಝೋನ್' ಸಿನಿಮಾ ಹಂಚಿಕೆ ವಿಚಾರ ಸಂಬಂಧ ನಿರ್ಮಾಪಕರ ನಡುವೆ ನಡೆದ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯ ಕಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನ ಸೋಮೇಶ್ವರ ನಗರದಲ್ಲಿ ಶುಕ್ರವಾರ ನಡೆದಿದೆ...

ಬೆಂಗಳೂರು: 'ಡೇಂಜರ್ ಝೋನ್' ಸಿನಿಮಾ ಹಂಚಿಕೆ ವಿಚಾರ ಸಂಬಂಧ ನಿರ್ಮಾಪಕರ ನಡುವೆ ನಡೆದ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯ ಕಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನ ಸೋಮೇಶ್ವರ ನಗರದಲ್ಲಿ ಶುಕ್ರವಾರ ನಡೆದಿದೆ. 
ಮನೋಜ್ (28) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಿತ್ರದ ಹಂಚಿಕೆ ವಿಚಾರದಲ್ಲಿ ನಿರ್ಮಾಪಕರ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮನೋಜ್ ಎಂಬಾತನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಗಲಾಟೆಯಲ್ಲಿ ಮೂವರು ವ್ಯಕ್ತಿಗಳಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ವರೂಪ್, ಗೋಪಿ ಮತ್ತು ಕಮಲ್ ಎಂದು ಗುರ್ತಿಸಲಾಗಿದೆ. 
ನಸುಕಿನ 2.30ಗಂಟೆ ಸುಮಾರಿಗೆ ಹತ್ಯೆ ಮಾಡಲಾಗಿದೆ. ಸ್ವಾಗತ್ ಕ್ಯಾಂಪ್ ಆಫೀಸಿನಲ್ಲಿ ಮನೋಜ್, ಸ್ವರೂಪ್, ಕಮಲ ಮತ್ತು ಗೋಪಿ ಪಾನಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಸಹ ನಿರ್ಮಾಪಕ ರಾಮು ಮತ್ತು ಇನ್ನೋರ್ವ ಸಹ ನಿರ್ಮಾಪಕ ಸ್ವರೂಪ್ ನಡುವೆ ಚಿತ್ರದ ವಿತರಣೆ ವಿಚಾರದಲ್ಲಿ ಜಗಳವಾಗಿದೆ. 
ಈ ವೇಳೆ ರಾಮು ತನ್ನ ಐವರು ಗೆಳೆಯರನ್ನು ಸ್ಥಳಕ್ಕೆ ಕರೆದಿದ್ದಾನೆ. ಮಾರಾಕಾಸ್ತ್ರಗಳಿಂದ ರಾಮು ಗೆಳೆಯರು ಏಕಏಕಿ ಮನೋಜ್, ಸ್ವರೂಪ್, ಕಮಲ ಮತ್ತು ಗೋಪಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೋಜ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 
ಸ್ಥಳಕ್ಕಾಗಮಿಸಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ರಾಮು ಹಾಗೂ ಆತನ ಸಹಚರರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!