ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ತೀವ್ರ ವಿರೋಧದಿಂದಾಗಿ ಬೆಂಗಳೂರಿನಲ್ಲಿ ಮೊದಲ ಡಬ್ಬಿಂಗ್ ಚಿತ್ರ ಸತ್ಯದೇವ್ ಐಪಿಎಸ್ ಬಿಡುಗಡೆ ರದ್ದು!

ಕನ್ನಡ ಸಂಘಟನೆಗಳ ತೀವ್ರ ವಿರೋಧದಿಂದಾಗಿ ಇಂದು ಬಿಡುಗಡೆಯಾಗಬೇಕಿದ್ದ ಮೊದಲ ಡಬ್ಬಿಂಗ್ ಚಿತ್ರ ಸತ್ಯದೇವ್ ಐಪಿಎಸ್ ಬೆಂಗಳೂರಿನಲ್ಲಿ...

ಸತ್ಯದೇವ್ ಐಪಿಎಸ್
Vishwanath S
Updated On : 3 Mar 2017, 1:20 am
ಬೆಂಗಳೂರು: ಕನ್ನಡ ಸಂಘಟನೆಗಳ ತೀವ್ರ ವಿರೋಧದಿಂದಾಗಿ ಇಂದು ಬಿಡುಗಡೆಯಾಗಬೇಕಿದ್ದ ಮೊದಲ ಡಬ್ಬಿಂಗ್ ಚಿತ್ರ ಸತ್ಯದೇವ್ ಐಪಿಎಸ್ ಬೆಂಗಳೂರಿನಲ್ಲಿ ರದ್ದುಗೊಂಡಿದೆ. 
ತಮಿಳಿನ ಸದ್ಯದೇವ್ ಐಪಿಎಸ್ ಚಿತ್ರ ಕನ್ನಡಕ್ಕೆ ಡಬ್ ಆದ ಮೊದಲ ಚಿತ್ರವಾಗಿದ್ದು ಈ ಚಿತ್ರ ಇಂದು ಬಿಡುಗಡೆಯಾಗಬೇಕಿತ್ತು. ಆದರೆ ಕನ್ನಡ ಪರ ಸಂಘಟನೆಗಳು ಡಬ್ಬಿಂಗ್ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನಲ್ಲಿ ಹಾಕಲಾಗಿದ್ದ ಸದ್ಯದೇವ್ ಐಪಿಎಸ್ ಚಿತ್ರದ ಪೋಸ್ಟರ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು ಇದರಿಂದಾಗಿ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆ ರದ್ದುಗೊಂಡಿದೆ. 
ಇನ್ನು ಡಬ್ಬಿಂಗ್ ಅನ್ನು ತೀವ್ರವಾಗಿ ವಿರೋಧಿಸುತ್ತಿರುವ ನಟ ಜಗ್ಗೇಶ್ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಡಬ್ಬಿಂಗ್ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಡಬ್ಬಿಂಗ್ ಚಿತ್ರ ರಿಲೀಸ್ ಮಾಡಿದ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದರು. 

Advertisement

Advertisement

ಈ ಹಿನ್ನೆಲೆಯಲ್ಲಿ ಬೆಂಗಳೂರು, ಚಿತ್ರದುರ್ಗ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ಎಲ್ಲಿಯೂ ಸತ್ಯದೇವ್ ಐಪಿಎಸ್ ಚಿತ್ರ ಬಿಡುಗಡೆ ಆಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದೆ. 
ತಮಿಳು ನಟ ಅಜಿತ್ ನಟಿಸಿರುವ ಎನ್ನೈ ಅರಿಂದಾಲ್ ಚಿತ್ರ ಕನ್ನಡದಲ್ಲಿ ಸತ್ಯದೇವ್ ಐಪಿಎಸ್ ಹೆಸರಿನಲ್ಲಿ ಡಬ್ ಆಗಿದೆ. ಇನ್ನು ಈ ಚಿತ್ರ ರಾಜ್ಯಾದ್ಯಂತ 60 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments