ದರ್ಶನ್ 
ಸಿನಿಮಾ ಸುದ್ದಿ

ಯುಗಾದಿಗೆ ರಿಲೀಸ್ ಆಗಲಿದೆ ಚಕ್ರವರ್ತಿ ಟ್ರೈಲರ್ :ಏಪ್ರಿಲ್ ನಲ್ಲಿ ಸಿನಿಮಾ ಬಿಡುಗಡೆ

ಹಲವು ದಿನಗಳಿಂದ ದರ್ಶನ್ ಅಭಿಮಾನಿಗಳು ಭಾರೀ ನಿರೀಕ್ಷೆಯಿಂದ ಕಾಯುತ್ತಿರುವ ಚಕ್ರವರ್ತಿ ಸಿನಿಮಾ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ,,

ಬೆಂಗಳೂರು: ಹಲವು ದಿನಗಳಿಂದ ದರ್ಶನ್ ಅಭಿಮಾನಿಗಳು ಭಾರೀ ನಿರೀಕ್ಷೆಯಿಂದ ಕಾಯುತ್ತಿರುವ ಚಕ್ರವರ್ತಿ ಸಿನಿಮಾ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಯುಗಾದಿಗೆ ಚಕ್ರವರ್ತಿ ಟ್ರೈಲರ್ ಬಿಡುಗೆಡಯಾಗಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಕ್ರವರ್ತಿ ಸಿನಿಮಾವನ್ನ ಚಿರಂತ್ ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು. ಸಿನಿಮಾ ಪ್ರಮೋಷನ್ ಟ್ರೈಲರ್ ಸಿದ್ಧ ಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸಿನಿಮಾದಲ್ಲಿ ದರ್ಶನ್ ಅವರನ್ನು 3 ಶೇಡ್ ಗಳಲ್ಲಿ ತೋರಿಸಲಾಗುತ್ತದೆ. ದರ್ಶನ್ ಪಾತ್ರದ ಪರಿಚಯ ಮಾಡಿಸುವ 2 ನಿಮಿಷಗಳ ಟ್ರೈಲರ್ ಅಭಿಮಾನಿಗಳಿಗಾಗಿ ಕಾಯುತ್ತಿದೆ ಎಂದು ಚಿರಂತ್ ತಿಳಿಸಿದ್ದಾರೆ.
ಸಿನಿಮಾದ ಸ್ಯಾಟಲೈಟ್ ಮತ್ತು ಹಿಂದಿ ಡಬ್ಬಿಂಗ್ ರೈಟ್ಸ್ ಈಗಾಗಲೇ ಮಾರಾಟವಾಗಿದೆ. ಚಕ್ರವರ್ತಿ ಸಿನಿಮಾದ ಹಂಚಿಕೆಯನ್ನು ದರ್ಶನ್ ಸಹೋದರ ದಿನಕರ್ ಮತ್ತು ಮಲ್ಲಿಕಾರ್ಜುನ್ ಅವರಿಗೆ ನೀಡಲಾಗಿದೆ.
ದೀಪಾ ಸನ್ನಿದಿ ನಾಯಕಿಯಾಗಿದ್ದು ಸಿದ್ದಾರ್ಥ್ ಫೀಚರ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ದರ್ಶನ್ ಸಹೋದರ ದಿನಕರ್ ಕೂಡ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!