ಭಾರತದಲ್ಲಿ ದಾಖಲೆ ಚಿತ್ರಮಂದಿರಗಳಲ್ಲಿ ಬಾಹುಬಲಿ 2 ಚಿತ್ರ ಬಿಡುಗಡೆ
ತೆಲುಗಿನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿಯ ನಿರ್ದೇಶನದ ಬಾಹುಬಲಿ 2 ಚಿತ್ರ ಬಿಡುಗಡೆಗೆ ಮುನ್ನ 500 ಕೋಟಿ ಗಳಿಗೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದು ಇದೀಗ...
ತೆಲುಗಿನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿಯ ನಿರ್ದೇಶನದ ಬಾಹುಬಲಿ 2 ಚಿತ್ರ ಬಿಡುಗಡೆಗೆ ಮುನ್ನ 500 ಕೋಟಿ ಗಳಿಗೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದು ಇದೀಗ ಮತ್ತೊಂದು ದಾಖಲೆ ಬರೆಯಲು ಮುಂದಾಗಿದೆ.
ಪ್ರಭಾಸ್ ಅಭಿನಯದ ಬಾಹುಬಲಿ 2 ಚಿತ್ರ ದೇಶಾದ್ಯಂತ ಬರೋಬ್ಬರಿ 6500 ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಾಣುವ ಮೂಲಕ ಅತೀ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಗೆಗೆ ಪಾತ್ರವಾಗಿದೆ.
ಬಾಹುಬಲಿ ಮೊದಲ ಭಾಗ ದೇಶಾದ್ಯಂತ 4000 ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿತ್ತು. ಇದೀಗ ಬಾಹುಬಲಿ 2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷಿತ ಚಿತ್ರವಾಗಿದ್ದು ಈ ಹಿನ್ನೆಲೆಯಲ್ಲಿ ಬರೋಬ್ಬರಿ 2500 ಸ್ಕ್ರೀನ್ ಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ 6500 ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿದೆ.
ಬಾಹುಬಲಿ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಕೃಷ್ಣ ಸೇರಿದಂತೆ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರ ಏಪ್ರಿಲ್ 28 ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.