ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ವೀಕೆಂಡ್ ವಿತ್ ರಮೇಶ್ ಸೀಸನ್-3 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಗಣ್ಯರ ಪಟ್ಟಿ!

ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ "ವೀಕೆಂಡ್ ವಿತ್ ರಮೇಶ್" ಸೀಸನ್ 3ಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಯಾವ ಯಾವ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂಬ ಪ್ರೇಕ್ಷಕರ ಕುತೂಹಲಕ್ಕೆ ಕಾರ್ಯಕ್ರಮದ ಮುಖ್ಯಸ್ಥ ರಾಘವೇಂದ್ರ ಹುಣಸೂರು ಅವರು ತೆರೆ ಎಳೆದಿದ್ದಾರೆ.

ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ "ವೀಕೆಂಡ್ ವಿತ್ ರಮೇಶ್" ಸೀಸನ್ 3ಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಯಾವ ಯಾವ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂಬ ಪ್ರೇಕ್ಷಕರ  ಕುತೂಹಲಕ್ಕೆ ಕಾರ್ಯಕ್ರಮದ ಮುಖ್ಯಸ್ಥ ರಾಘವೇಂದ್ರ ಹುಣಸೂರು ಅವರು ತೆರೆ ಎಳೆದಿದ್ದಾರೆ.

ಅವರೇ ಬಹಿರಂಗ ಪಡಿಸಿದಂತೆ ಈ ಬಾರಿಯ ಸೀಸನ್ ಕೇವಲ ಸಿನಿಮಾ ರಂಗಕ್ಕೆ ಮಾತ್ರವಲ್ಲದೇ ಸಮಾಜವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಪೂರ್ವ ವ್ಯಕ್ತಿಗಳ ಸಮ್ಮಿಲನವಾಗಿರಲಿದೆಯಂತೆ. ರಾಜಕೀಯ, ಕ್ರೀಡೆ, ಸಿನಿಮಾ  ಮತ್ತು ಕಾನೂನು ಕ್ಷೇತ್ರಕ್ಕೆ ಸಂಬಂಧಿಸಿದ ಗಣ್ಯಾತಿ ಗಣ್ಯರು ಸೀಸನ್ 3ಯಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಹೇಳಿದ್ದಾರೆ. ಸೀಸನ್ 2 ಸರಣಿ ಸಂಪೂರ್ಣ ಸಿನಿಮಾ ಮಯವಾಗಿದ್ದ ಹಿನ್ನಲೆಯಲ್ಲಿ ಸೀಸನ್ 3ಯಲ್ಲಿ ಸಮಾಜದ ವಿವಿಧ  ಕ್ಷೇತ್ರಗಳ ಗಣ್ಯರನ್ನೂ ಕರೆಸುವಂತೆ ಪ್ರೇಕ್ಷಕರಿಂದ ವ್ಯಾಪಕ ಒತ್ತಾಯ ಕೇಳಿಬಂದಿತ್ತಂತೆ.

ಹೀಗಾಗಿ ಈ ಬಾರಿಯ ಸೀಸನ್ 3 ಸರಣಿ ಹಲವು ಕ್ಷೇತ್ರಗಳ ಗಣ್ಯರಿಂದ ಕೂಡಿರಲಿದೆ ಎಂದು ರಾಘವೇಂದ್ರ ಹುಣಸೂರು ಹೇಳಿದ್ದಾರೆ.  

ಇನ್ನು ತೀವ್ರ ಕುತೂಹಲ ಕೆರಳಿಸಿರುವ ಸೀಸನ್ 3ಯಲ್ಲಿ ಪಾಲ್ಗೊಳ್ಳಲಿರುವ ಗಣ್ಯರ ಪಟ್ಟಿ ಇಂತಿದೆ.
ಗಂಗಾವತಿ ಬಿಚಿ ಎಂದೇ ಖ್ಯಾತರಾದ ಹಾಸ್ಯಕಲಾವಿದ ಪ್ರಾಣೇಶ್
ಮೈಸೂರು ಎಸ್ ಪಿ ರವಿ ಚೆನ್ನಣ್ಣನವರ್
ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ
ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ಖ್ಯಾತ ನಟ ಪ್ರಕಾಶ್ ರೈ
ನಟ ಜಗ್ಗೇಶ್
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ
ಸಂಗೀತ ನಿರ್ದೇಶಕ ಹರಿಕೃಷ್ಣ
ಖ್ಯಾತ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ
ಖ್ಯಾತ ಗೀತ ರಚನೆಕಾರ ಜಯಂತ್ ಕಾಯ್ಕಿಣಿ
ನಟಿ ರಮ್ಯಾ
ಖ್ಯಾತ ನಟಿ ಮಾಲಾಶ್ರೀ
ಭಾರತಿ ವಿಷ್ಣುವರ್ಧನ್
ಖ್ಯಾತ ಹಿರಿಯ ನಿರ್ದೇಶಕ ಕಾಶೀನಾಥ್
ಖ್ಯಾತ ಹಿರಿಯ ನಟಿ ಅರುಂಧತಿ ನಾಗ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT