'ಅಂಜನಿಪುತ್ರ' ಪುನೀತ್ ರಾಜ್ಕುಮಾರ್ ಜತೆ ಹರಿಪ್ರಿಯಾ ಡಾನ್ಸ್
ನೀರ್ ದೋಸೆ ಚಿತ್ರದ ಮೂಲಕ ಪ್ರೇಕ್ಷಕರ ಪ್ರಶಂಸೆಗೆ ಪಾತ್ರರಾಗಿರುವ ನಟಿ ಹರಿಪ್ರಿಯ ಕನ್ನಡ ರಾಜರತ್ನ ನಟ ಪುನೀತ್ ರಾಜ್ಕುಮಾರ್ ಜತೆ ಹೆಜ್ಜೆ ಹಾಕಲಿದ್ದಾರೆ...
ನೀರ್ ದೋಸೆ ಚಿತ್ರದ ಮೂಲಕ ಪ್ರೇಕ್ಷಕರ ಪ್ರಶಂಸೆಗೆ ಪಾತ್ರರಾಗಿರುವ ನಟಿ ಹರಿಪ್ರಿಯ ಕನ್ನಡ ರಾಜರತ್ನ ನಟ ಪುನೀತ್ ರಾಜ್ಕುಮಾರ್ ಜತೆ ಹೆಜ್ಜೆ ಹಾಕಲಿದ್ದಾರೆ.
ಅಂಜನಿಪುತ್ರ ಚಿತ್ರದ ನಿರ್ದೇಶಕ ಹರ್ಷ ಪುನೀತ್ ಅವರೊಟ್ಟಿಗೆ ಕುಣಿಯಲು ಹರಿಪ್ರಿಯರನ್ನು ಆಯ್ಕೆ ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ ಇಂಟ್ರಡಕ್ಷನ್ ಸಾಂಗ್ ನಲ್ಲಿ ಹರಿಪ್ರಿಯ ಹೆಜ್ಜೆ ಹಾಕಲಿದ್ದು ನಾಳೆಯಿಂದ ಹಾಡಿನ ಚಿತ್ರೀಕರಣ ಪ್ರಾರಂಭವಾಗಲಿದೆ. ಅಂಜನಿಪುತ್ರಕ್ಕೆ ಎಂಎನ್ ಕುಮಾರ್ ಹಣ ಹೂಡಿದ್ದಾರೆ. ಇನ್ನು ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನಿರ್ದೇಶನ ಮಾಡಿದ್ದು ಸ್ವಾಮಿ ಅವರ ಛಾಯಾಗ್ರಹಣವಿದೆ.
ಪುನೀತ್ ರಾಜ್ಕುಮಾರ್ ಅಂಜನಿಪುತ್ರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪುನೀತ್ ಗೆ ಕಿರಿಕ್ ಪಾರ್ಟಿ ಚಿತ್ರದ ನಟಿ ರಶ್ಮಿಕಾ ಮಂದಣ್ಣ ಜತೆಯಾಗಿದ್ದಾರೆ.
ರಾಜಕುಮಾರ ಚಿತ್ರದ ಮೂಲಕ ಪುನೀತ್ ರಾಜ್ಕುಮಾರ್ ಸ್ಯಾಂಡಲ್ವುಡ್ ನಂಬರ್ 1 ನಟ ಎನಿಸಿಕೊಂಡಿದ್ದಾರೆ. ಇನ್ನು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ನಲ್ಲೂ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.