ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಮಲ್ಟಿಪ್ಲೆಕ್ಸ್‌ ಟಿಕೆಟ್ ದರ ಮಿತಿ 200 ರುಪಾಯಿ, ಆದೇಶ ಹಿಂಪಡೆಯಲು ಆಗ್ರಹ

ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳ ಟಿಕೆಟ್ ದರ 200 ರುಪಾಯಿಗೆ ಮಿತಿಗೊಳಿಸಿ ಹೊರಡಿಸಿರುವ....

ಬೆಂಗಳೂರು: ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳ ಟಿಕೆಟ್ ದರ 200 ರುಪಾಯಿಗೆ ಮಿತಿಗೊಳಿಸಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಭಾರತೀಯ ಮಲ್ಟಿಪ್ಲೆಕ್ಸ್ ಸಂಘ(ಎಂಎಐ) ಗುರುವಾರ ಒತ್ತಾಯಿಸಿದೆ.
ಸರ್ಕಾರದ ಈ ಆದೇಶ ಚಿತ್ರೋದ್ಯಮ ಹಾಗೂ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದಿರುವ ಮಲ್ಟಿಪ್ಲೆಕ್ಸ್ ಸಂಘ, ಟಿಕೆಟ್ ದರವನ್ನು 200 ರುಪಾಯಿಗೆ ಮಿತಿಗೊಳಿಸಿ ಹೊರಡಿಸಿರುವ ಅಧಿಸೂಚನೆಯನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ಎಂಎಐ ಅಧ್ಯಕ್ಷ ದೀಪಕ್ ಅಶೆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಕೆಟ್ ದರ ಮಿತಿಗೊಳಿಸಿರುವುದು ಹೂಡಿಕೆದಾರರ ವಿರೋಧಿ ಕ್ರಮವಾಗಿದ್ದು, ಇದರಿಂದ ಕರ್ನಾಟಕದಲ್ಲಿ ಹೊಸ ಮಲ್ಟಿಪ್ಲೆಕ್ಸ್ ನಿರ್ಮಾಣಕ್ಕೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಅಶೆರ್ ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಚಿತ್ರಗಳ ಟಿಕೆಟ್ ದರ ಗರಿಷ್ಠ 200 ರುಪಾಯಿಗೆ ನಿಗದಿಗೊಳಿಸಿ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!