ಪ್ರಕಾಶ್ ರೈ 
ಸಿನಿಮಾ ಸುದ್ದಿ

ನೋಟು ನಿಷೇಧ ಅತಿ ದೊಡ್ಡ ತಪ್ಪು: ದೇಶದ ಕ್ಷಮೆ ಕೇಳಲು ಪ್ರಕಾಶ್ ರೈ ಒತ್ತಾಯ

ನೋಟು ನಿಷೇಧ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಅತಿ ದೊಡ್ಡ ತಪ್ಪು ಮಾಡಿರುವ ಕೇಂದ್ರ ಸರ್ಕಾರ ದೇಶದ ಜನರ ಕ್ಷಮೆ ಕೇಳುವಂತೆ ನಟ ಪ್ರಕಾಶ್ ರೈ ..

ಚೆನ್ನೈ: ನೋಟು ನಿಷೇಧ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಅತಿ ದೊಡ್ಡ ತಪ್ಪು ಮಾಡಿರುವ ಕೇಂದ್ರ ಸರ್ಕಾರ ದೇಶದ ಜನರ ಕ್ಷಮೆ ಕೇಳುವಂತೆ ನಟ ಪ್ರಕಾಶ್ ರೈ ಒತ್ತಾಯಿಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು "ಸಂಬಂಧಪಟ್ಟವರ ಗಮನಕ್ಕೆ" ಎಂಬ ಶೀರ್ಷಿಕೆ ನೀಡಿದ್ದಾರೆ. "ಶ್ರೀಮಂತರು ತಮ್ಮ ಕಪ್ಪು ಹಣವನ್ನು ಹೊಳೆಯುವ ಹೊಸ ನೋಟುಗಳಿಗೆ ಬದಲಾಯಿಸಲು ದಾರಿಗಳು ಕಂಡುಕೊಂಡರು. ಇದರಿಂದ ಹತ್ತಾರು ಲಕ್ಷ ಅಸಹಾಯಕ ಹಾಗೂ ಅಸಂಘಟಿತ ವಲಯದಲ್ಲಿರುವ ಕಾರ್ಮಿಕರ ಬದುಕು ಡೋಲಾಯಮಾನ ಆಯಿತು. ನಮ್ಮ ಕಾಲ ಘಟ್ಟದ ಅತಿ ದೊಡ್ಡ ತಪ್ಪು ನಿರ್ಣಯಕ್ಕೆ ಕ್ಷಮೆ ಕೇಳುವ ಮನಸ್ಸು ಮಾಡಿದಿರಾ?" ಎಂದು ಪ್ರಶ್ನಿಸಿದ್ದಾರೆ..
ಕಳೆದ ವರ್ಷ ನವೆಂಬರ್ ಎಂಟರಂದು ಪ್ರಧಾನಿ ನರೇಂದ್ರ ಮೋದಿ ಐನೂರು, ಸಾವಿರ ರುಪಾಯಿ ನೋಟುಗಳ ನಿಷೇಧದ ಘೋಷಣೆ ಮಾಡಿದ್ದರು. ಕಪ್ಪು ಹಣದ ನಿಯಂತ್ರಣಕ್ಕೆ ಹಾಗೂ ಭಯೋತ್ಪಾದಕರಿಗೆ ಹಣಕಾಸು ನೆರವು ದೊರೆಯದಂತೆ ಮಾಡಲು ಈ ನಿರ್ಧಾರ ಮಾಡಲಾಗಿದೆ ಎಂದು ಪ್ರಧಾನಿ ಹೇಳಿದ್ದರು.
ಇತ್ತೀಚೆಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನವಾಗಿರುವುದಕ್ಕೆ ಅವರು ನನಗಿಂತ ದೊಡ್ಡ ನಟ ಎಂದು ಟೀಕಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ