ಬಾಲಿವುಡ್ ನಟ ವರುಣ್ ಧವನ್ 
ಸಿನಿಮಾ ಸುದ್ದಿ

ಯುವತಿಯಿಂದ ಕಿರುಕುಳ: ಬೇಸತ್ತು ಪೊಲೀಸರಿಗೆ ದೂರು ನೀಡಿದ ಬಾಲಿವುಡ್ ನಟ ವರುಣ್

ಕೆಲ ದಿನಗಳಿಂದ ಯುವತಿಯೊಬ್ಬಳು ಕಿರುಕುಳ ನೀಡುತ್ತಿದ್ದು, ಇದರಿಂದ ಬೇಸತ್ತಿರುವ ಬಾಲಿವುಡ್ ನಟ ವರುಣ್ ಧವನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆಂದು...

ಮುಂಬೈ: ಕೆಲ ದಿನಗಳಿಂದ ಯುವತಿಯೊಬ್ಬಳು ಕಿರುಕುಳ ನೀಡುತ್ತಿದ್ದು, ಇದರಿಂದ ಬೇಸತ್ತಿರುವ ಬಾಲಿವುಡ್ ನಟ ವರುಣ್ ಧವನ್ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಯುವತಿಯೊಬ್ಬಳು ತಮಗೆ ಬೆದರಿಕೆ ಹಾಕುತ್ತಿದ್ದಾಳೆಂದು ಮುಂಬೈನ ಸಾಂತಾಕ್ರೂಸ್ ಪೊಲೀಸ್ ಠಾಣೆಯಲ್ಲಿ ವರುಣ್ ಅವರು ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ. 
ಕೆಲ ದಿನಗಳಿಂದ ಮಹಿಳೆಯೊಬ್ಬರು ನನ್ನ ಮೊಬೈಲ್ ಸಂಖ್ಯೆಗೆ ಕರೆ ಹಾಗೂ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಆಕೆಯ ಸಂದೇಶಗಳಿಗೆ ಪ್ರತಿಕ್ರಿಯೆ ನೀಡದಿದ್ದರೆ, ಸತ್ತು ಹೋಗುತ್ತೇನೆಂದು ಆಕೆ ಬೆದರಿಕೆ ಹಾಕುತ್ತಿದ್ದಾಳೆಂದು ದೂರಿನಲ್ಲಿ ವರುಣ್ ಅವರು ಹೇಳಿಕೊಂಡಿದ್ದಾರೆ. ಅದಲ್ಲದೆ ಸೈಬರ್ ಪೊಲೀಸರಿಗೂ ವರುಣ್ ಅವರು ದೂರು ನೀಡಿದ್ದಾರೆ. 
ವ್ಯಕ್ತಿಯೊಬ್ಬರು ನನಗೆ ಪತ್ರ ಬರೆಯುತ್ತಿದ್ದು, ಆ ಮಹಿಳೆಯೊಂದಿಗೆ ಮಾತನಾಡುವಂತೆ ತಿಳಿಸುತ್ತಿದ್ದಾರೆ. ಒಂದು ವೇಳೆ ಮಹಿಳೆಯೊಂದಿಗೆ ಮಾತನಾಡದಿದ್ದರೆ, ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆಂದು ಬೆದರಿಕೆ ಹಾಕುತ್ತಿದ್ದಾರೆಂದು ವರಣ್ ಅವರು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ವರುಣ್ ಧವನ್ ಅವರಿಂದ ಈಗಾಗಲೇ ದೂರನ್ನು ದಾಖಲಿಸಿಕೊಳ್ಳಲಾಗಿದ್ದು, ಬೆದರಿಕೆ ಹಾಕುತ್ತಿದ್ದ ವ್ಯಕ್ತಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ. ಮಹಿಳೆಯೊಬ್ಬರು ವರುಣ್ ವಾಟ್ಸ್ಆ್ಯಪ್ ನಂಬರ್ ಗೆ ಪ್ರತಿನಿತ್ಯ ಮೆಸೇಜ್ ಗಳನ್ನು ಮಾಡುತ್ತಿದ್ದಳು. ಈ ರೀತಿ ಸಂದೇಶಗಳನ್ನು ಕಳುಹಿಸಬೇಡ ಎಂದು ವರುಣ್ ಅವರು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಆದಾವುದಕ್ಕೂ ಆಕೆ ಲೆಕ್ಕಿಸದೆಯೇ ಸಂದೇಶಗಳನ್ನು ಕಳುಹಿಸಿದ್ದಾಳೆ. ಹೀಗಾಗಿ ವಿಧಿಯಿಲ್ಲದೆ. ಯುವತಿಯ ನಂಬರನ್ನು ವರುಣ್ ಅವರು ಬ್ಲಾಕ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...