ನಿಖಿಲ್ ಕುಮಾರ್ 
ಸಿನಿಮಾ ಸುದ್ದಿ

'ಜಾಗ್ವರ್' ನಿಖಿಲ್ ಕುಮಾರ್ 3ನೇ ಚಿತ್ರಕ್ಕೆ ಹರ್ಷ ನಿರ್ದೇಶನ

ಸ್ಯಾಂಡಲ್ವುಡ್ ನ ಬಹುಕೋಟಿ ವೆಚ್ಚದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಅಭಿನಯಿಸುತ್ತಿರುವ ಜಾಗ್ವರ್ ನಿಖಿಲ್ ಕುಮಾರ್ ಅವರ ಮೂರನೇ ಚಿತ್ರವನ್ನು ಹರ್ಷ...

ಸ್ಯಾಂಡಲ್ವುಡ್ ನ ಬಹುಕೋಟಿ ವೆಚ್ಚದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಅಭಿನಯಿಸುತ್ತಿರುವ ಜಾಗ್ವರ್ ನಿಖಿಲ್ ಕುಮಾರ್ ಅವರ ಮೂರನೇ ಚಿತ್ರವನ್ನು ಹರ್ಷ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ನಿಖಲ್ ಕುಮಾರ್ ಸಹ ಸಿಟಿ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಇದನ್ನು ಸ್ಪಷ್ಟಪಡಿಸಿದ್ದಾರೆ. ನಿರ್ದೇಶಕ ಹರ್ಷ ಜತೆ ಹಲವು ಬಾರಿ ಕಥೆ ಕುರಿತಂತೆ ಚರ್ಚೆಗಳು ನಡೆದಿದ್ದು ಯೋಜನೆ ಅಂತಿಮಗೊಂಡಿದೆ. ನವೆಂಬರ್ ಕೊನೆಯ ವಾರದಲ್ಲಿ ಅಥವಾ ಡಿಸೆಂಬರ್ ನಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭಗೊಳ್ಳಲಿದೆ. 
ಹರ್ಷ ಅವರ ಫಿಲ್ಮಂ ಮೇಕಿಂಗ್ ಶೈಲಿ ನನಗೆ ತುಂಬಾ ಇಷ್ಟ. ನಾಡಪ್ರಭು ಕೆಂಪೇಗೌಡ ಕುರಿತಾದ ನಾಟಕವೊಂದರಲ್ಲಿ ಅವರೊಂದಿಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದರು. ಇನ್ನು ಚಿತ್ರದ ಕುರಿತಂತೆ ಅಧಿಕೃತ ಮಾಹಿತಿ ಮುಂದಿನ ದಿನಗಳಲ್ಲಿ ಹೊರಬೀಳಲಿದೆ ಎಂದರು. 
ಸದ್ಯ ಹರ್ಷ ಸ್ಯಾಂಡಲ್ವುಡ್ ನ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಅಂಜನಿಪುತ್ರ ಚಿತ್ರದ ನಿರ್ದೇಶನದಲ್ಲಿ ಬಿಸಿಯಾಗಿದ್ದಾರೆ. ಅಂಜನಿಪುತ್ರ ನಂತರ ಹರ್ಷ ನಿಖಿಲ್ ಕುಮಾರ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್