ಚಮಕ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಚಮಕ್ ಗೆ ಸಿಗಲಿದೆಯೇ ಮುಂಗಾರು ಮಳೆಯ ಲಕ್?

ಡಿಸೆಂಬರ್ 29, 2006 ನಟ ಗಣೇಶ್ ಅವರಿಗೆ ಅದೃಷ್ಟದ ದಿನವಾಗಿತ್ತು. ಅಂದು ಅವರ ಮುಂಗಾರು ....

ಬೆಂಗಳೂರು: ಡಿಸೆಂಬರ್ 29, 2006 ನಟ ಗಣೇಶ್ ಅವರಿಗೆ ಅದೃಷ್ಟದ ದಿನವಾಗಿತ್ತು. ಅಂದು ಅವರ ಮುಂಗಾರು ಮಳೆ ಸಿನಿಮಾ ಬಿಡುಗಡೆಯಾಗಿತ್ತು. ಗಣೇಶ್ ಅವರಿಗೆ ದೊಡ್ಡ ಬ್ರೇಕ್ ಸಿಕ್ಕಿದ ಚಿತ್ರ ಕೂಡ ಹೌದು. ಅಲ್ಲಿಂದ ಗಣೇಶ್ ಗೋಲ್ಡನ್ ಸ್ಟಾರ್ ಆಗಿ ಬದಲಾದರು.
ಇದೀಗ 11 ವರ್ಷಗಳ ನಂತರ ಗಣೇಶ್ ಅವರ ಚಮಕ್ ಚಿತ್ರ ಅದೇ ತಾರೀಖಿನಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಸುನಿ ನಿರ್ದೇಶನದ ಚಮಕ್ ಚಿತ್ರದಲ್ಲಿ ಸ್ತ್ರೀರೋಗ ತಜ್ಞರಾಗಿ ನಟಿಸಿದ್ದಾರೆ. ಗಣೇಶ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. 
ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಮಕ್ ಸೆನ್ಸಾರ್ ಮಂಡಳಿಯಿಂದ ಒಪ್ಪಿಗೆ ಸಿಗಬೇಕಾಗಿರುವುದರಿಂದ ಚಿತ್ರ ಬಿಡುಗಡೆ ದಿನಾಂಕವನ್ನು ಪ್ರೊಡಕ್ಷನ್ ಹೌಸ್ ಮತ್ತು ನಿರ್ದೇಶಕರಿಗೆ ನಿರ್ಧರಿಸಲು ಸಾಧ್ಯವಿಲ್ಲ. ಆದರೂ ಡಿಸೆಂಬರ್ 29ರಂದು ಬಿಡುಗಡೆ ಮಾಡಲು ಚಿತ್ರತಂಡ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಜುಡ್ಹಾ ಸಾಂಡಿ ಅವರ ಸಂಗೀತವಿರುವ ಚಿತ್ರಕ್ಕೆ ಸಂತೋಷ್ ರಾಜ್ ಪಾತಾಜೆ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ