ರಚಿತಾ ರಾಮ್ 
ಸಿನಿಮಾ ಸುದ್ದಿ

ಬಿಕಿನಿ ತೊಡುವುದೇ ಗ್ಲಾಮರ್ ಅಲ್ಲ: ರಚಿತಾ ರಾಮ್

ಜಾನಿ ಜಾನಿ ಎಸ್ ಪಪ್ಪಾ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಚಿತ್ರದಲ್ಲಿ ಎನ್ ಆರ್ ಐ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಜಾನಿ ಜಾನಿ ಎಸ್ ಪಪ್ಪಾ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಚಿತ್ರದಲ್ಲಿ ಎನ್ ಆರ್ ಐ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 
ಗ್ಲಾಮರಸ್ ಪಾತ್ರದಲ್ಲಿ ಅಭಿನಯಿಸುತ್ತಿರುವ ರಚಿತಾ ರಾಮ್ ಇಂಡೋ-ವೆಸ್ಟ್ರನ್ ಶೈಲಿಯಲ್ಲಿ ವಿನ್ಯಾಸಗೊಳಿಸಿರುವ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಹಿಂದಿನ ಚಿತ್ರಗಳಿಗಿಂತ ವಿಭಿನ್ನವಾಗಿ ಕಾಣಿಸಿಕೊಳ್ಳುವ ಉದ್ದೇಶ ಹೊಂದಿರುವ ರಚಿತಾ ರಾಮ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದು, ತಾವು ನಿರ್ವಹಿಸುತ್ತಿರುವ ಎನ್ ಆರ್ ಐ ಪಾತ್ರಕ್ಕೆ ಹೆಚ್ಚಿನ ಪಾಶ್ಚಾತ್ಯ ಲುಕ್ ಅಗತ್ಯವಿದೆ. ನನ್ನ ಡೈಲಾಗ್ ಗಳೂ ಸಹ ಬಹುತೇಕ ಕಂಗ್ಲಿಷ್ ನಲ್ಲಿಯೇ ಇರುತ್ತವೆ. ಈ ಬಗ್ಗೆ ಚಿತ್ರ ತಂಡ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಗ್ಲಾಮರ್ ಬಗ್ಗೆಯೂ ಮಾತನಾಡಿರುವ ಅವರು, ತಮ್ಮನ್ನು ಗ್ಲಾಮರ್ ಕ್ವೀನ್ ಎಂದು ಕರೆಯುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಬಿಕಿನಿ ತೊಡುವುದರಿಂದಲಷ್ಟೇ ಗ್ಲಾಮರ್ ಎನ್ನುವುದನ್ನು ನಿರಾಕರಿಸಿರುವ ರಚಿತಾ ರಾಮ್,  ಬಿಕಿನಿ ತೊಟ್ಟು ಎಕ್ಸ್ ಪೋಸ್ ಮಾಡುವುದೇ ಗ್ಲಾಮರ್ ನ ವ್ಯಾಖ್ಯಾನ ಎಂಬುದನ್ನು ಒಪ್ಪುವುದಿಲ್ಲ ಎಂದಿದ್ದಾರೆ. ತಮ್ಮ ಪ್ರಕಾರ ಗ್ಲಾಮರ್ ಎಂದರೆ ಸೌಂದರ್ಯ ಹಾಗೂ ತಮಗೆ ಸಮಾಧಾನಕರವಾಗಿರುವುದು ಎಂದು ಹೇಳಿದ್ದು ಬಿಕಿನಿ ತೊಡದೆಯೂ ಗ್ಲಾಮರಸ್ ಆಗಿ ಕಾಣಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್