ದರ್ಶನ್ 
ಸಿನಿಮಾ ಸುದ್ದಿ

ದರ್ಶನ್ 'ಕುರುಕ್ಷೇತ್ರ' ಚಿತ್ರೀಕರಣ ಅಂತಿಮ ಹಂತಕ್ಕೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಕುರುಕ್ಷೇತ್ರ ಇದೀಗ ಅಂತಿಮ ಹಂತಕ್ಕೆ ತಲುಪಿದೆ...

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಕುರುಕ್ಷೇತ್ರ ಇದೀಗ ಅಂತಿಮ ಹಂತಕ್ಕೆ ತಲುಪಿದೆ. 
ಕುರುಕ್ಷೇತ್ರ ಚಿತ್ರದಲ್ಲಿ ಮುಖ್ಯಘಟ್ಟವೆಂದೇ ಹೇಳಲಾಗುವ ಗದಾಯುದ್ಧದ ಚಿತ್ರೀಕರಣಕ್ಕೆ ಸಿನಿಮಾ ತಂಡ ಸಜ್ಜಾಗಿದ್ದು, ಇದೇ ತಿಂಗಳ ನ.24 ರಂದು ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ. 
ಕುರುಕ್ಷೇತ್ರದ ವಿಶೇಷವೆಂದರೆಕ ಚಿತ್ರೀಕರಣಕ್ಕೆ ಹಾಕಿದ್ದ ಶೆಡ್ಯೂಲ್ ಗೂ ಮುಂಚೆಯೇ ಕುರುಕ್ಷೇತ್ರ ಸಿನಿಮಾದ ಚಿತ್ರೀಕರಣ ಪೂರ್ಣಗೊಳ್ಳುತ್ತಿದೆ. 3ಡಿಯಲ್ಲಿ ಚಿತ್ರೀಕರಣ ನಡೆಸುವ ಕುರಿತಂತೆ ನಿರ್ಧಾರ ಕೈಗೊಂಡ ಬಳಿಕ 300 ದಿನಗಳು ಚಿತ್ರೀಕರಣ ಮಾಡಬೇಕು ಎಂದು ಸಿನಿಮಾ ತಂಡ ಲೆಕ್ಕಾಚಾರ ಹಾಕಿತ್ತು. ಆದರೆ, ನಿರ್ಮಾಪಕರು 2 ಕ್ಯಾಮೆರಾಗಳನ್ನಿಟ್ಟು ಒಟ್ಟೊಟ್ಟಿಗೆ ಚಿತ್ರೀಕರಣವನ್ನು ಪ್ರಾರಂಭ ಮಾಡಿದ್ದರಿಂದಾಗಿ 150 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. 
ಕುರುಕ್ಷೇತ್ರದ ಗದಾಯುದ್ದ ದೃಶ್ಯ ಚಿತ್ರೀಕರಣದ ಸಮಯದಲ್ಲಿ ಅತೀ ಹೆಚ್ಚು ತಂತ್ರಜ್ಞರು ಸೆಟ್ ನಲ್ಲಿ ಕೆಲಸ ಮಾಡಲಿದ್ದಾರೆ. ಸುಮಾರು 500 ಜನ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ತೆರೆಯ ಹಿಂದೆಯೂ 300 ಜನ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯ ಚಿತ್ರವು ಅಂತಿಮ ಘಟ್ಟ ತಲುಪಿದ್ದು, 2018 ಫೆಬ್ರವರಿ ತಿಂಗಳಲ್ಲಿ ಕುರುಕ್ಷೇತ್ರ ತೆರೆಕಾಣುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ