ಚಮಕ್ ನಲ್ಲಿ ರಶ್ಮಿಕಾ ಹಾಗೂ ಗಣೇಶ್ 
ಸಿನಿಮಾ ಸುದ್ದಿ

ಬಿಡುಗಡೆಗೆ ಚಮಕ್ ಸಿದ್ಧ: ಇಂದು ಅಧಿಕೃತ ಟೀಸರ್ ಬಿಡುಗಡೆ

ಸಿಂಪಲ್ ಸುನಿ ನಿರ್ದೇಶನದ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಚಮಕ್' ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದ್ದು, ಸೋಮವಾರ ಸಂಜೆ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ.

ಬೆಂಗಳೂರು: ಸಿಂಪಲ್ ಸುನಿ ನಿರ್ದೇಶನದ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಚಮಕ್' ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದ್ದು, ಸೋಮವಾರ ಸಂಜೆ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ.
ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ಚಮಕ್ ಚಿತ್ರದ ಟೀಸರ್ ಇಂದು ಸಂಜೆ 6 ಗಂಟೆಗೆ ಬಿಡುಯಾಗುತ್ತಿದ್ದು, ಈ ಬಗ್ಗೆ ಸ್ವತಃ ಚಿತ್ರದ ನಾಯಕ ಗಣೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ  ಹಂಚಿಕೊಂಡಿದ್ದಾರೆ. ಟೀಸರ್ ನಲ್ಲಿ ಏನೆಲ್ಲಾ ಇರಬಹುದು ಎಂಬ ಕಾತುರ ಅಭಿಮಾನಿಗಳಲ್ಲಿ ಇದ್ದು, ಚಿತ್ರ ಆರಂಭವಾದ ದಿನದಿಂದಲೂ ಚಿತ್ರತಂಡ ಚಿತ್ರದ ಕುರಿತು ಗೌಪ್ಯತೆ ಕಾಪಾಡಿಕೊಂಡಿತ್ತು. ಇದೇ ಕಾರಣಕ್ಕೆ ಚಿತ್ರದ ಕುರಿತ  ಟೀಸರ್ ಆಗಲೀ ಅಥವಾ ಟ್ರೇಲರ್ ಆಗಲಿ ಬಿಡುಗಡೆ ಮಾಡಿರಲಿಲ್ಲ.
ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇದೇ ಹೊತ್ತಿನಲ್ಲಿ ಚಿತ್ರತಂಡ ಚಿತ್ರದ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿದ್ದು, ಇದರ ಮೊದಲ ಭಾಗವಾಗಿ ಚಿತ್ರದ ಟ್ರೇಲರ್ ಅನ್ನು ಇಂದು ಬಿಡುಗಡೆ  ಮಾಡುತ್ತಿದೆ. ಸಿಂಪಲ್ ಸುನಿ ಮತ್ತು ಗಣೇಶ್ ತಮ್ಮ ಕಾಂಬಿನೇಷನ್ ಮೂಲಕವೇ ಚಮಕ್ ಚಿತ್ರ ಗಾಂಧಿನಗರದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರೊಂದಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ, ವಿಶೇಷ ಪಾತ್ರವೊಂದರಲ್ಲಿ  ಗಣೇಶ್ ಮಗಳ 'ಚಾರಿತ್ರ್ಯ' ಕೂಡ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಕುರಿತ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಚಿತ್ರವನ್ನು ಟಿಆರ್ ಚಂದ್ರಶೇಖರ್ ಅವರು ನಿರ್ಮಾಣ ಮಾಡಿದ್ದು, ಚಿತ್ರಕ್ಕೆ ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಖ್ಯಾತಿಯ ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದಾರೆಯ ಇನ್ನು ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿದ್ದು,  ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಇನ್ನು ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!