ಸಿಂಪಲ್ ಮದುವೆಯಂತೆ! ಆದರೆ ಬಜೆಟ್ ಮಾತ್ರ 10 ಕೋಟಿ?
ಟಾಲಿವುಡ್ ನ ಸೂಪರ್ ಸ್ಟಾರ್ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಹಾಗೂ ಸ್ಟಾರ್ ನಟಿ ಸಮಂತಾ ವಿವಾಹವಾಗುತ್ತಿರುವುದು ಗೊತ್ತಿರುವ ವಿಚಾರವೇ...
ಟಾಲಿವುಡ್ ನ ಸೂಪರ್ ಸ್ಟಾರ್ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಹಾಗೂ ಸ್ಟಾರ್ ನಟಿ ಸಮಂತಾ ವಿವಾಹವಾಗುತ್ತಿರುವುದು ಗೊತ್ತಿರುವ ವಿಚಾರವೇ. ಈ ಜೋಡಿ ಸಿಂಪಲ್ ಆಗಿ ಮದುವೆಯಾಗುತ್ತಿದ್ದು ಬಜೆಟ್ ಮಾತ್ರ 10 ಕೋಟಿಯಂತೆ.
ಹೌದು ನಾಗಚೈತನ್ಯ ಹಾಗೂ ಸಮಂತಾ ರುತ್ ಪ್ರಭು ಅವರ ಮದುವೆ ಅಕ್ಟೋಬರ್ 6ರಂದು ಗೋವಾದಲ್ಲಿ ನಡೆಯಲಿದೆ. ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ನಡೆಯಲಿದ್ದು ಆಪ್ತ 100 ಮಂದಿಗೆ ಮಾತ್ರ ಆಮಂತ್ರಣ ನೀಡಲಾಗಿದೆ.
ಮದುವೆ ಮಾತ್ರ ಸಿಂಪಲ್ ಎಂದು ಹೇಳುತ್ತಿರುವ ಜೋಡಿ ಮದುವೆಗೆ ಸುಮಾರು 10 ಕೋಟಿ ಖರ್ಚು ಮಾಡಲಿದೆಯಂತೆ. ಅಕ್ಟೋಬರ್ 6ರಂದು ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದ್ದು ಮದುವೆಗೆ ವಿಂಟೇಜ್ ಲುಕ್ ನಲ್ಲಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.