ಸಿನಿಮಾ ಸುದ್ದಿ

ಕನ್ನಡದ ಪೊಗರು ಸಿನಿಮಾದಲ್ಲಿ ಅಭಿನಯ: ನಟಿ ಶೃತಿ ಹಾಸನ್ ಹೇಳಿದ್ದೇನು?

Shilpa D
ಚೆನ್ನೈ: ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ನಂದ ಕಿಶೋರ್ ನಿರ್ದೇಶನದ ಪೊಗರು ಸಿನಿಮಾದಲ್ಲಿ ಧ್ರುವ ಸರ್ಜಾಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.
ಪೊಗರು ಸಿನಿಮಾದಲ್ಲಿ ನಟಿಸುವ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಶೃತಿ ಸದ್ಯಕ್ಕೆ ಕನ್ನಡ ಚಿತ್ರದಲ್ಲಿ ನಟಿಸುವ ಆಲೋಚನೆಯಿಲ್ಲ, ಈ ಬಗ್ಗೆ ನಾನು ಯಾರೊಂದಿಗೂ ಚರ್ಚಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪೊಗರು ಸಿನಿಮಾದ ಮೂಲಕ ಶೃತಿ ಹಾಸನ್ ಅವರನ್ನು ಕನ್ನಡಕ್ಕೆ ಪರಿಚಯಿಸುತ್ತಿರುವುದಾಗಿ ನಂದ ಕಿಶೋರ್ ನೀಡಿದ್ದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. 
SCROLL FOR NEXT