ಬಾಲಿವುಡ್ ನಟಿ ವಿದ್ಯಾ ಬಾಲನ್ 
ಸಿನಿಮಾ ಸುದ್ದಿ

ಬಲವಂತದಿಂದ ರಾಷ್ಟ್ರಭಕ್ತಿ ಹೇರಬಾರದು: ನಟಿ ವಿದ್ಯಾ ಬಾಲನ್

ರಾಷ್ಟ್ರಗೀತೆಯೊಂದಿಗೆ ದಿನವನ್ನು ಆರಂಭಿಸಲು ನಾವು ಶಾಲೆಯಲ್ಲಿಲ್ಲ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ರಾಷ್ಟ್ರಗೀತೆಯೊಂದಿಗೆ ದಿನವನ್ನು ಆರಂಭಿಸಲು ನಾವು ಶಾಲೆಯಲ್ಲಿಲ್ಲ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ಶನಿವಾರ ಹೇಳಿದ್ದಾರೆ. 


ಖಾಸಗಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಚಿತ್ರಮಂದಿರಗಳಲ್ಲಿ ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಕುವುದ ಸರಿಯಲ್ಲ. ರಾಷ್ಟ್ರಗೀತೆಯೊಂದಿಗೆ ನಮ್ಮ ದಿನ ಆರಂಭಿಸಲು ನಾವು ಶಾಲೆಯಲ್ಲಿಲ್ಲ ಎಂದು ಹೇಳಿದ್ದಾರೆ. 

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಿಸಬಾರದು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಬಲವಂತದಿಂದ ಯಾರ ಮೇಲೂ ದೇಶಭಕ್ತಿ ಹೇರಬಾರದು. ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ನನ್ನ ದೇಶವನ್ನು ಸಮರ್ಥಿಸಿಕೊಳ್ಳಲು ಎಷ್ಟು ಆಳಕ್ಕೆ ಬೇಕಾದರೂ ಹೋಗುತ್ತೇನೆ. ಆದರೆ, ಇದನ್ನು ಹೇಳುವ ಅಗತ್ಯವಿಲ್ಲ. ರಾಷ್ಟ್ರಗೀತೆಯನ್ನು ಎಲ್ಲಿಯೇ ಕೇಳಿದರೂ ನಾನು ಎದ್ದು ನಿಲ್ಲುತ್ತೇನೆಂದು ತಿಳಿಸಿದ್ದಾರೆ. ನಟಿ ವಿದ್ಯಾ ಬಾಲನ್ ಅವರು ಕೇಂದ್ರೀಯ ಚಲನಚಿತ್ರ ಮಂಡಳಿ (ಸಿಬಿಎಫ್'ಸಿ) ಸದಸ್ಯೆಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT