ನಿರ್ದೇಶಕ ಸೂರಿ ನಿರ್ದೇಶನದಲ್ಲಿ ಟಗರು ಮತ್ತು ಜೋಗಿ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರದಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ವುಡ್ ನಟ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಇದೀಗ ಮುಂದಿನ ಚಿತ್ರಕ್ಕೆ ರೆಡಿಯಾಗಿದ್ದಾರೆ.
ಮಲಯಾಳಂನ ಬ್ಲಾಕ್ ಬಸ್ಟರ್ ಒಪ್ಪಂ ರಿಮೇಕ್ ಚಿತ್ರದಲ್ಲಿ ನಟಿಸಲು ಶಿವಣ್ಣ ಮುಂದಾಗಿದ್ದಾರೆ. ಮೂಲ ಚಿತ್ರದಲ್ಲಿ ಮೋಹನ್ ಲಾಲ್ ನಟಿಸಿದ್ದ ಪಾತ್ರದಲ್ಲಿ ಶಿವಣ್ಣ ನಟಿಸುತ್ತಿದ್ದು ಇದರಲ್ಲಿ ಕುರುಡನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.
ಮಲಯಾಳಂನ ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಒಪ್ಪಂ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರವು ಅಪಾರ್ಟ್ ಮೆಂಟ್ ನಲ್ಲಿ ನಡೆಯುವ ಕೊಲೆ ಪ್ರಕರಣವನ್ನು ಅದೇ ಅಪಾರ್ಟ್ ಮೆಂಟ್ ನಲ್ಲಿ ಕುರುಡನಾಗಿ ಲಿಫ್ಟ್ ಮ್ಯಾನ್ ಆಗಿರುವ ಆತ ಹೇಗೆ ಪತ್ತೆ ಹಚ್ಚುತ್ತಾನೆ ಎಂಬ ಕಥಾವಸ್ತುವನ್ನು ಚಿತ್ರ ಹೊಂದಿದೆ.
ಒಪ್ಪಂ ಕನ್ನಡದ ಅವತರಣಿಕೆ ಚಿತ್ರವನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾರ ಬಳಿ ಕೆಲಸ ಮಾಡಿದ್ದ ಜಿವಿಆರ್ ವಾಸು ಎಂಬುವರು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಪ್ರಿಪ್ರೊಡೆಕ್ಷನ್ ಕೆಲಸಗಳು ನಡೆಸುತ್ತಿದ್ದು ಅಕ್ಟೋಬರ್ ನಲ್ಲಿ ಚಿತ್ರ ಸೆಟ್ ಹೇರುವ ಸಾಧ್ಯತೆ ಇದೆ.
ಎಂವಿವಿ ಸತ್ಯನಾರಾಯಣ ಜತೆಗೂಡಿ ಸಂಪತ್ ಕುಮಾರ್ ಎಂಬುವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು ಮಲಯಾಳಂನ ಒಪ್ಪಂ ಚಿತ್ರದಲ್ಲಿ ನಟಿಸಿದ್ದ ಬಾಲ ನಟಿ ಬೇಬಿ ಮೀನಾಕ್ಷಿಯನ್ನೇ ಕನ್ನಡದ ಆವತಣಿಕೆಯ ಚಿತ್ರಕ್ಕೂ ಕರೆತರಲು ನಿರ್ಮಾಪಕರು ತೀರ್ಮಾನಿಸಿದ್ದಾರೆ.
ಚಿತ್ರದ ಚಿತ್ರೀಕರಣವನ್ನು ಶಿವಮೊಗ್ಗ, ಊಟಿ ಮತ್ತು ಬೆಂಗಳೂರಿನಲ್ಲಿ ನಡೆಸಲು ಚಿತ್ರತಂಡ ತೀರ್ಮಾನಿಸಿದೆ. ಇನ್ನು ಚಿತ್ರದ ಪಾತ್ರವೊಂದಕ್ಕೆ ಹಿರಿಯ ನಟ ಅನಂತ್ ನಾಗ್ ಅವನ್ನು ಕೇಳಿರುವುದಾಗಿ ಸಂಪರ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics