ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಬಿ.ವಿ. ರಾಧಾ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 70 ವರ್ಷ ವಯಸ್ಸಾಗಿತ್ತು. ಅವರ ಪತಿ ಕೆಎಸ್ಎಲ್ ಸ್ವಾಮಿ ಎರಡು ವರ್ಷಗಳ ಹಿಂದೆ ಇಹಲೋಕ ತ್ಯಜಿಸಿದ್ದರು.
ಕೆಲ ವರ್ಷಗಳ ಹಿಂದೆ ಕ್ಯಾನ್ಸರಿಗೆ ತುತ್ತಾಗಿದ್ದ ರಾಧಾ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಆದರೆ, ನಿನ್ನೆ ಬೆಳಗ್ಗೆ ಅಸ್ವಸ್ಥಗೊಂಡ ಅವರನ್ನು ಕಲ್ಯಾಣನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ.
ಅವರು ಪುತ್ರಿ ಧನಲಕ್ಷ್ಮಿ ಹಾಗೂ ಅಪಾರ ಬಂಧು, ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಹೊರಮಾವಿನಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿ.ವಿ ರಾಧಾ ಅವರ ಇಚ್ಛೆಯಂತೆ ಅವರ ಪಾರ್ಥಿವ ಶರೀರವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾನ ಮಾಡಲು ಕುಟುಂಬ ವರ್ಗ ನಿರ್ಧರಿಸಿದೆ.
ನವಕೋಟಿ ನಾರಾಯಣ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅವರು, ಕನ್ನಡ, ತೆಲುಗು ಮತ್ತಿತರ ಭಾಷೆಗಳು ಒಳಗೊಂಡಂತೆ ಸುಮಾರು ೨೫೦ ಚಿತ್ರಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics