ಭರ್ಜರಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಬೆಂಗಳೂರಿನ ಈ ಎರಡು ಪ್ರಸಿದ್ಧ ಥಿಯೇಟರ್ ಗಳಲ್ಲೂ ರಿಲೀಸ್ ಆಗಲಿದೆ 'ಭರ್ಜರಿ'

ಸ್ಯಾಂಡಲ್ ವುಡ್ ಈ ವಾರಾಂತ್ಯದಲ್ಲಿ ಮತ್ತೊಂದು ಸಾಧನೆ ಮಾಡುವತ್ತ ಹೆಜ್ಜೆ ಇಟ್ಟಿದೆ, ಕಳೆದ 20 ವರ್ಷಗಳಿಂದ ಕನ್ನಡ ಸಿನಿಮಾಗಳ ಪ್ರದರ್ಶನವನ್ನೆ ...

ಬೆಂಗಳೂರು: ಸ್ಯಾಂಡಲ್ ವುಡ್  ಈ ವಾರಾಂತ್ಯದಲ್ಲಿ ಮತ್ತೊಂದು ಸಾಧನೆ ಮಾಡುವತ್ತ ಹೆಜ್ಜೆ ಇಟ್ಟಿದೆ, ಕಳೆದ 20 ವರ್ಷಗಳಿಂದ ಕನ್ನಡ ಸಿನಿಮಾಗಳ ಪ್ರದರ್ಶನವನ್ನೆ ಕಾಣದ ರೆಕ್ಸ್ ಮತ್ತು ಊರ್ವಶಿ ಚಿತ್ರಮಂದಿರಗಳಲ್ಲಿ ಭರ್ಜರಿ ಸಿನಿಮಾ ರಿಲೀಸ್ ಆಗಲಿದೆ.
ರೆಕ್ಸ್ ಮತ್ತು ಊರ್ವಶಿ ಸೇರಿದಂತೆ ಒಟ್ಟು 300 ಥಿಯೇಟರ್ ಗಳಲ್ಲಿ ಧ್ರುವ ಸರ್ಜಾ ಅಭಿನಯದ ಭರ್ಜರಿ ಸಿನಿಮಾ ರಿಲೀಸ್ ಆಗಲಿದೆ. ಈ ಎರಡು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಚಿತ್ರತಂಡ ಸಂತಸಗೊಂಡಿದೆ.
ಈ ಎರಡು ಥಿಯೇಟರ್ ಗಳಲ್ಲಿ ಕೇವಲ ಹಿಂದಿ ಮತ್ತು ಇಂಗ್ಲೀಷ್ ಸಿನಿಮಾಗಳು ಮಾತ್ರ ಬಿಡುಗಡೆಗೊಳ್ಳುತ್ತಿದ್ದವು. ಆದರೆ ಸಿನಿಮಾದ ಟ್ರೈಲರ್ ಮತ್ತು ಹಾಡುಗಳನ್ನು ಕೇಳಿ ಪ್ರೇರಿತರಾಗಿರುವ ಥಿಯೇಟರ್ ಮಾಲೀಕರು ಭರ್ಜರಿ ಸಿನಿಮಾ ರಿಲೀಸ್ ಗೆ ಸಮ್ಮತಿಸಿದ್ದಾರೆ ಎಂದು ನಿರ್ದೇಶಕ ಚೇತನ್ ಕುಮಾರ್ ಹೇಳಿದ್ದಾರೆ.
ಆರ್.ಎಸ್ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗಿರುವ ಭರ್ಜರಿ ಸಿನಿಮಾವನ್ನು ಪ್ರಸಾದ್ ಹಂಚಿಕೆ ಮಾಡುತ್ತಿದ್ದಾರೆ, ರಚಿತಾ ರಾಮ್, ಹರಿಪ್ರಿಯಾ ಧ್ರುವ ಸರ್ಜಾಗೆ ನಾಯಕಿಯರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್