ಮುಂಬೈ: ಸ್ಯಾಂಡಲ್ವುಡ್ ನ ಅದ್ಧೂರಿ ಬಜೆಟ್ ಚಿತ್ರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ನಿರ್ಮಿಸಿದ್ದ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣ ಸಂಬಂಧ ಸಾರ್ವಜನಿಕರ ಠೇವಣಿ ಹಣವನ್ನು ಮರುಪಾವತಿ ಮಾಡದೇ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ಪೊಲೀಸರು ಆನಂದ್ ಅಪ್ಪುಗೋಳ್ ಅವರನ್ನು ಬಂಧಿಸಿದ್ದಾರೆ.
ಸಹಕಾರಿ ಬ್ಯಾಂಕ್ ಕಚೇರಿಗೆ ಬೀಗ ಹಾಕಿ ಠೇವಣಿದಾರರಿಗೆ ಮೋಸ ಮಾಡಿದ್ದಾರೆ ಎಂದು ಆನಂದ್ ಅಪ್ಪುಗೋಳ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ವಿರುದ್ಧ ಸಾರ್ವಜನಿಕರು ದೂರು ದಾಖಲಿಸಿದ್ದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ಆನಂದ್ ಅಪ್ಪುಗೋಳ್ ನಿರ್ಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics