ಡಾರ್ಲಿಂಗ್ ಕೃಷ್ಣ 
ಸಿನಿಮಾ ಸುದ್ದಿ

ಹುಚ್ಚ2 ನನ್ನ ವೃತ್ತಿಯಲ್ಲಿ ಬದಲಾವಣೆ ತರುವ ನಿರೀಕ್ಷೆಯಿದೆ: ಡಾರ್ಲಿಂಗ್ ಕೃಷ್ಣ

ಈ ವಾರ ಬಿಡುಗಡೆಯಾಗುತ್ತಿರುವ ಹುಚ್ಚ 2 ಚಿತ್ರದ ಬಗ್ಗೆ ಪ್ರೇಕ್ಷಕರ ಪ್ರತಿಕ್ರಿಯೆಗಾಗಿ ಕಾಯುತ್ತಿರುವ ಮದರಂಗಿ ...

ಈ ವಾರ ಬಿಡುಗಡೆಯಾಗುತ್ತಿರುವ ಹುಚ್ಚ 2 ಚಿತ್ರದ ಬಗ್ಗೆ ಪ್ರೇಕ್ಷಕರ ಪ್ರತಿಕ್ರಿಯೆಗಾಗಿ ಕಾಯುತ್ತಿರುವ ಮದರಂಗಿ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಇದರಲ್ಲಿ ತಾಂತ್ರಿಕ ಕೆಲಸವನ್ನು ಕೂಡ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ಚೆನ್ನೈಯಿಂದ ಸಿಟಿ ಎಕ್ಸ್ ಪ್ರೆಸ್ ಗೆ ದೂರವಾಣಿ ಮೂಲಕ ಮಾತನಾಡಿರುವ ಡಾರ್ಲಿಂಗ್ ಕೃಷ್ಣ.

ನಟನಾಗಿ ಬರುವ ಮುನ್ನ ನಿರ್ದೇಶಕ ಸೂರಿಯವರ ಜೊತೆ ಸಹಾಯಕರಾಗಿ ಕೆಲಸ ಮಾಡಿದ್ದ ಡಾರ್ಲಿಂಗ್ ಕೃಷ್ಣ ಅಂದು ಕಲಿತ ತಾಂತ್ರಿಕ ಕೌಶಲ್ಯ ಇಂದು ಸಹಾಯಕ್ಕೆ ಬಂದಿದೆ ಎನ್ನುತ್ತಾರೆ. ಓಂ ಪ್ರಕಾಶ್ ರಾವ್ ನಿರ್ದೇಶನದ ಹುಚ್ಚ2 ನ ಪೋಸ್ಟ್ ಪ್ರೊಡಕ್ಷನ್ ಕೆಲಸ ಮತ್ತು ಥಿಯೇಟರ್ ನಲ್ಲಿ ಬಿಡುಗಡೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಸುಮಾರು 50 ವರ್ಷ ವಯಸ್ಸಿನ ನಿರ್ದೇಶಕ ಓಂ ಪ್ರಕಾಶ್ ಅವರಿಗೆ ಚಿತ್ರದ ಪ್ರಚಾರ, ಬಿಡುಗಡೆಗೆ ಓಡಾಟ ನಡೆಸಲು ಸಾಧ್ಯವಿಲ್ಲ. ನಾನು ಹುಚ್ಚ-2ಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ನನಗೆ ಆ ಕೆಲಸ ಗೊತ್ತಿರುವುದರಿಂದ ಕಷ್ಟವಾಗಲಿಲ್ಲ. ಹುಚ್ಚ2 ಶೀರ್ಷಿಕೆ ಕೂಡ ಆಕರ್ಷಕವಾಗಿದೆ. 17 ವರ್ಷಗಳ ಹಿಂದೆ ಹುಚ್ಚ ಸಿನಿಮಾವನ್ನು ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡಿದ್ದರು. ಆ ಚಿತ್ರದ ಮೂಲಕ ಸುದೀಪ್ ತುಂಬಾ ಜನಪ್ರಿಯರಾದರು. ಆ ಚಿತ್ರದ ಯಶಸ್ಸಿನ ನಿರೀಕ್ಷೆ ಇದೀಗ ಹುಚ್ಚ2 ಮೇಲಿದೆ. ಈ ಚಿತ್ರದ ಮೇಲೆ ಸೆಂಟಿಮೆಂಟ್ ಸೇರಿಕೊಂಡಿದೆ, ಈ ಚಿತ್ರ ಕೂಡ ನನ್ನ ವೃತ್ತಿಬದುಕಿನಲ್ಲಿ ಬದಲಾವಣೆ ತರುವ ನಿರೀಕ್ಷೆಯಿದೆ ಎನ್ನುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video