ರಮೇಶ್ ಅರವಿಂದ್ 
ಸಿನಿಮಾ ಸುದ್ದಿ

ನಟ ರಮೇಶ್ ಸಾರಥ್ಯದಲ್ಲಿ ಕನ್ನಡದ ಕೋಟ್ಯಾಧಿಪತಿ-3?

ನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿಗೆ ಹೊಸ ಸಾರಥಿ ದೊರಕಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುತ್ತಿದ್ದ....

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿಗೆ ಹೊಸ ಸಾರಥಿ ದೊರಕಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುತ್ತಿದ್ದ ಕಾರ್ಯಕ್ರಮದ ಹೊಸ ಸೀಜನ್ ನಿರೂಪಣೆಗೆ ಕನ್ನಡದ ಇನ್ನೊಬ್ಬ ಪ್ರಸಿದ್ದ ನಟ ರಮೇಶ್ ಅರವಿಂದ್ ಒಪ್ಪಿದ್ದಾರೆಂದು ಹೇಳಲಾಗಿದೆ.
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೂಲಕ ಮೋಡಿ ಮಾಡಿದ್ದ ರಮೇಶ್ ಅರವಿಂದ್ ಸ್ಟಾರ್ ಸುವರ್ಣ ವಾಹಿನಿ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದ ಮೂರನೇ ಸೀಜನ್ ನಲ್ಲಿ ನಿರೂಪಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿದೆ.
ಹಿಂದಿಯಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೆಬಿಸಿ ಅತ್ಯಂತ ಜನಪ್ರಿಯವಾಗಿದೆ. ಕನ್ನಡದಲ್ಲಿ ಎರಡು ಸೀಜನ್ ಗಳಲ್ಲಿ ಪುನೀತ್ ರಾಜ್ ಕುಮಾರ್ ನಡೆಸಿಕೊಟ್ಟಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಈ ಬಾರಿ ಪುನೀತ್ ಬದಲಿಗೆ ನಟ ರಮೇಶ್ ಆಗಮನವಾಗಲಿದೆ. ಈ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ. ವಾಹಿನಿಯ ಒಪ್ಪಂದಗಳಿಗೆ ಸಹಿ ಹಾಕುವುದು ಬಾಕಿ ಇದೆ ಎನ್ನಲಾಗಿದೆ.
ಸಧ್ಯ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ಪವರ್ ಸ್ಟಾರ್ ಪುನೀತ್ ಇತ್ತೀಚೆಗಷ್ಟೇ ಫ್ಯಾಮಿಲಿ ಪವರ್ ರಿಯಾಲಿಟಿ ಶೋ ನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ’ನಟಸಾರ್ವಭೌಮ’ ಸೇರಿ ನಾನಾ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಕಾರ್ಯಕ್ರಮ ನಿರೂಪಣೆಯಿಂದ ಹಿಂದೆ ಸರಿದಿದ್ದಾರೆ.
ರಮೇಶ್ ಅರವಿಂದ್ ಅವರಿಗೆ ಮುನ್ನ ವಾಹಿನಿಯು ಕಾರ್ಯಕ್ರಮ ನಡೆಸಿಕೊಡುವಂತೆ ನಟ ಯಶ್ ಅವರನ್ನು ಕೇಳಿತ್ತೆನ್ನಲಾಗಿದೆ. ಆದರೆ ಯಶ್ ಚಿತ್ರೀಕರಣಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕಾರಣ ಅವರು ಕಾರ್ಯಕ್ರಮ ನಿರೂಪಣೆಗೆ ಒಪ್ಪಿಲ್ಲ. ಅಂತಿಮವಾಗಿ ರಮೇಶ್ ಅರವಿಂದ್ ಶೋ ನಿರೂಪಕರಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಇಷ್ಟಾಗಿ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಎಂದಿನಿಂದ ಆರಂಭವಾಗಲಿದೆ ಎನ್ನುವುದರ ಕುರಿತು ವಾಹಿನಿ ಇನ್ನೂ ಸ್ಪಷ್ಟನೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT