ದರ್ಶನ್ 
ಸಿನಿಮಾ ಸುದ್ದಿ

ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ 'ಭಗತ್ ಸಿಂಗ್' ಪಾತ್ರದಲ್ಲಿ ಡಿ ಬಾಸ್ ದರ್ಶನ್!

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ ಡಿ ಬಾಸ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ...

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದಲ್ಲಿ ಡಿ ಬಾಸ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರಕ್ಕಾಗಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರದ ನಿರ್ದೇಶಕ ನರಸಿಂಹ ಅವರು ಹೇಳಿದ್ದಾರೆ. 
ದರ್ಶನ್ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಫೋಟೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇನ್ನು ದರ್ಶನ್ ಜತೆ ಪ್ರಜ್ವಲ್ ಮತ್ತು ಭಾವನರ ಕೆಲ ದೃಶ್ಯಗಳನ್ನು ಅದಾಗಲೇ ಚಿತ್ರೀಕರಣ ಮಾಡಲಾಗಿದೆ. 
ಇದು ಭಗತ್ ಸಿಂಗ್ ಅವರ ಜೀವನಾಧಾರಿತ ಚಿತ್ರವಲ್ಲ. ಬದಲಿಗೆ ಸ್ವಾತಂತ್ರ್ಯ ಹೋರಾಟಗಾರನ ಮತ್ತು ಪ್ರಜ್ವಲ್ ನಡುವಿನ ಸಂಬಂಧ. ಇದು ಒಂದು ಸಂಪೂರ್ಣ ಔಟ್ ಅಂಡ್ ಔಟ್ ಎಂಟರ್ಟೈನ್ಮೆಂಟ್ ಚಿತ್ರದ ಎಂದು ನಿರ್ದೇಶಕರು ಹೇಳಿದ್ದಾರೆ. 
ಶೇಖಡ 75ರಷ್ಟು ಚಿತ್ರೀಕರಣ ಮುಕ್ತಾಯವಾಗಿದ್ದು ಚಿತ್ರದ ಹಾಡುಗಳ ಚಿತ್ರೀಕರಣ ಬಾಕಿ ಇದೆ. ಇನ್ನು ರಮೇಶ್ ಅರವಿಂದ್ ಚಿತ್ರದಲ್ಲಿ ಕಳನಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅವರ ಭಾಗದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗಿದೆ. 
ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದು ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT