ವಿಜಯ್ ದೇವರಕೊಂಡ, ಅನುಪಮ ಪರಮೇಶ್ವರನ್ 
ಸಿನಿಮಾ ಸುದ್ದಿ

ಕೇರಳ ಪ್ರವಾಹ ಪೀಡಿತರ ನೆರವಿಗೆ ನಿಂತ ರೀಲ್ ಹೀರೋ ವಿಜಯ್, ನಟಿ ಅನುಪಮ!

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನುಪಮ ಪರಮೇಶ್ವರನ್ ಇದೀಗ ತಮ್ಮ ಮಾನವೀಯ ಕಾರ್ಯದ ಮೂಲಕ ಮತ್ತೊಮ್ಮೆ ಎಲ್ಲರ ಮನಗೆದ್ದಿದ್ದಾರೆ...

ಹೈದರಾಬಾದ್/ತಿರುವನಂತಪುರಂ: ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನುಪಮ ಪರಮೇಶ್ವರನ್ ಇದೀಗ ತಮ್ಮ ಮಾನವೀಯ ಕಾರ್ಯದ ಮೂಲಕ ಮತ್ತೊಮ್ಮೆ ಎಲ್ಲರ ಮನಗೆದ್ದಿದ್ದಾರೆ. 
ಮಹಾ ಮಳೆಗೆ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದ ಹಲವೆಡೆ ಪ್ರವಾಸ ಸಂಭವಿಸಿದೆ. ಇನ್ನು ರಾಜ್ಯದ ಜಲಾಶಯಗಳೆಲ್ಲ ತುಂಬಿ ಹರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿಜಯ್ ದೇವರಕೊಂಡ ಮತ್ತು ಅನುಪಮ ಕೇರಳಿಗರಿಗೆ ನೆರವಿನ ಹಸ್ತ ಚಾಚಿದ್ದಾರೆ. 
ವಿಜಯ್ ದೇವರಕೊಂಡ ಅವರು ಕೇರಳದ ಪ್ರವಾಹ ಪೀಡಿತ ಪರಿಹಾರ ಕಾರ್ಯಕ್ಕೆ 5 ಲಕ್ಷ ರುಪಾಯಿ ನೀಡಿದ್ದರೆ, ಅನುಪಮ ಅವರು 1 ಲಕ್ಷ ರುಪಾಯಿ ಪರಿಹಾರ ನೀಡಿದ್ದಾರೆ. 
ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ವಿಜಯ್, ರಜಾ ದಿನಗಳಲ್ಲಿ ಕೇರಳ ನನ್ನ ನೆಚ್ಚಿನ ತಾಣವಾಗಿತ್ತು. ನಾನು ಕೇರಳದಲ್ಲಿ ಹಲವರನ್ನು ಭೇಟಿ ಮಾಡಿದ್ದೇನೆ. ಮಾತ್ರವಲ್ಲದೆ ನನ್ನ ಹಲವು ಆಪ್ತರು ಅಲ್ಲಿದ್ದಾರೆ. ವೈಯಕ್ತಿಕವಾಗಿ ಹಣವನ್ನು ಹೇಗೆ ತಲುಪಿಸಬೇಕೆಂದು ತಿಳಿಯುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ. 
ವಿಜಯ್ ಮತ್ತು ಅನುಪಮ ಅವರ ಈ ಕಾರ್ಯಕ್ಕೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದು ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ