ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಭೀಕರ ಅಪಘಾತ: ನಟ-ನಿರ್ದೇಶಕ ಹೇಮಂತ್ ಕುಮಾರ್ ದುರ್ಮರಣ

ಕಿರು ಚಿತ್ರ ನಿರ್ದೇಶಕ, ನಟ 32 ವರ್ಷದ ವಿಶೇಷ ಚೇತನ ಹೇಮಂತ್ ಕುಮಾರ್ ಎಂಬುವರು ನೆಲಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ...

ಬೆಂಗಳೂರು: ಕಿರು ಚಿತ್ರ ನಿರ್ದೇಶಕ, ನಟ 32 ವರ್ಷದ ವಿಶೇಷ ಚೇತನ ಹೇಮಂತ್ ಕುಮಾರ್ ಎಂಬುವರು ನೆಲಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. 
ಕಳೆದ ರಾತ್ರಿ ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹೇಮಂತ್ ಕುಮಾರ್ ಸ್ಧಳದಲ್ಲೇ ದುರ್ಮರಣ ಹೊಂದಿದ್ದು ಆತನ ಸ್ನೇಹಿತ ವೀರೇಂದ್ರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಹೇಮಂತ್ ಕುಮಾರ್ ನಗರದ ಮಾಗಡಿ ರಸ್ತೆಯ ಮಾಚೋಹಳ್ಳಿಯ ನಿವಾಸಿಯಾಗಿದ್ದರು. ಹೇಮಂತ್ ಕೆಲ ಕನ್ನಡದ ಕಿರು ಚಿತ್ರಗಳನ್ನು ನಿರ್ದೇಶಿಸಿ ನಟಿಸಿದ್ದಾರೆ. ಹೇಮಂತ್ ಅವರಿಗೆ ಎರಡೂ ಕೈಗಳು ಇರಲಿಲ್ಲ. ಹೀಗಾಗಿ ಬೈಕ್ ಅನ್ನು ಸ್ನೇಹಿತ ವೀರೇಂದ್ರ ಚಲಾಯಿಸುತ್ತಿದ್ದರು. 
ನೆಲಮಂಗಲದ ವಿರಾಂಜನಿಪುರದ ಬಳಿ ಬರುತ್ತಿದ್ದಾಗ ವೀರೇಂದ್ರ ಬೈಕ್ ನಿಯಂತ್ರಣ ಕಳೆದುಕೊಂಡಿದ್ದಾರೆ. ವೇಗವಾಗಿ ಬರುತ್ತಿದ್ದರಿಂದ ಬೈಕ್ ರಸ್ತೆ ವಿಭಜಕಕ್ಕೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ರಸ್ತೆ ಮೇಲೆ ಬಿದ್ದಿದ್ದು ಹೇಮಂತ್ ಕುಮಾರ್ ಅವರ ತಲೆಗೆ ಬಲವಾದ ಗಾಯವಾಗಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿರುವ ವೀರೇಂದ್ರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!