'ಗಿಮ್ಮಿಕ್' ಶೂಟಿಂಗ್ ಆರಂಭಿಸಿದ ಗೋಲ್ಡನ್ ಸ್ಟಾರ್ ಗಣೇಶ್
ಪ್ರಶಾಂತ್ ರಾಜ್ ನಿರ್ದೇಶನದ ಆರೇಂಜ್ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಗಿಮ್ಮಿಕ್ ಸಿನಿಮಾ ಶೂಟಿಂಗ್ ನಲ್ಲಿ ...
ಬೆಂಗಳೂರು: ಪ್ರಶಾಂತ್ ರಾಜ್ ನಿರ್ದೇಶನದ ಆರೇಂಜ್ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಗಿಮ್ಮಿಕ್ ಸಿನಿಮಾ ಶೂಟಿಂಗ್ ನಲ್ಲಿ ಸೋಮವಾರದಿಂದ ಪಾಲ್ಗೊಂಡಿದ್ದಾರೆ.
ಮೊದಲ ಬಾರಿಗೆ ಕಾಮಿಡಿ ಹಾರರ್ ಸಿನಿಮಾದಲ್ಲಿ ಗಣೇಶ್ ನಟಿಸುತ್ತಿದ್ದಾರೆ, ಗಿಮ್ಮಿಕ್ ಸಿನಿಮಾವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು, ಸದ್ಯ ನಾಗಣ್ಣ ಮುನಿರತ್ನ ಕುರು ಕ್ಷೇತ್ರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.
ಗಿಮ್ಮಿಕ್ ಸಿನಿಮಾದಲ್ಲಿ ಗಣೇಶ್ ಗೆ ಜೋಡಿಯಾಗಿ ರೋನಿಕಾ ಸಿಂಗ್ ನಟಿಸುತ್ತಿದ್ದಾರೆ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ರೋನಿಕಾ ನಟಿಸುತ್ತಿದ್ದಾರೆ.ಶ್ರೀಲಂಕಾದಲ್ಲಿ ಚಿತ್ರೀಕರಣ ಮುಗಿಸಿ ಬಂದ ನಂತರ ಬೆಂಗಳೂರಿನಲ್ಲಿ ಶೂಟಿಂಗ್ ಶೆಡ್ಯೂಲ್ ಗೆ ಪ್ಲಾನ್ ಮಾಡಲಾಗಿದೆ.
ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ರವಿ ವರ್ಮಾ ಸಾಹಸ ನಿರ್ದೇಶನ ಮಾಡಿದ್ದಾರೆ. ದೀಪಕ್ ಸಮಿ ಸಿನಿಮಾ ನಿರ್ಮಾಪಕರಾಗಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.