ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಅವನೇ ಶ್ರೀಮನ್ನಾರಾಯಣ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಒಂದು ದೊಡ್ಡ ಚಾಲೆಂಜ್: ನಿರ್ದೇಶಕ

ಸಚಿನ್ ಬಿಆರ್ ಅವರು ಅವನೇ ಶ್ರೀಮನ್ನಾರಾಯಣ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಒಂದು ಚಾಲೆಂಜ್ ಆಗಿದೆ ಎಂದು ಹೇಳಿದ್ದಾರೆ...

ಸಚಿನ್ ಬಿಆರ್ ಅವರು ಅವನೇ ಶ್ರೀಮನ್ನಾರಾಯಣ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಒಂದು ಚಾಲೆಂಜ್ ಆಗಿದೆ ಎಂದು ಹೇಳಿದ್ದಾರೆ. 
ನಟ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಚಿತ್ರವನ್ನು ರಕ್ಷಿತ್ ಶೆಟ್ಟಿ, ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ಹೆಚ್ ಕೆ ಪ್ರಕಾಶ್ ಸೇರಿ ಒಟ್ಟಾಗಿ ನಿರ್ಮಾಣ ಮಾಡುತ್ತಿದ್ದಾರೆ. 
ಈ ಭಾರೀ ಬಜೆಟ್ ನ ಚಿತ್ರದ ಚಿತ್ರೀಕರಣವನ್ನು ನಿರ್ದೇಶಕ ಸಚಿನ್ ಬಿಆರ್ ಹಗಲು ರಾತ್ರಿ ಎನ್ನದೆ ಚಿತ್ರೀಕರಣ ಮಾಡುತ್ತಿದ್ದಾರೆ. ಇನ್ನು ತಮ್ಮ ಚಿತ್ರದ ಕುರಿತಂತೆ ಸಚಿನ್ ಅವರು ಸಿಟಿ ಎಕ್ಸ್ ಪ್ರೆಸ್ ಜತೆ ಮಾತನಾಡಿದ್ದಾರೆ. 
ಅವನೇ ಶ್ರೀಮನ್ನಾರಾಯಣ ಚಿತ್ರದ ಮೊದಲಾರ್ಧದ ಚಿತ್ರೀಕರಣ ಮುಕ್ತಾಯವಾಗಿದೆ. ಇನ್ನು ಚಿತ್ರದಲ್ಲಿನ ರಕ್ಷಿತ್ ಶೆಟ್ಟಿ ಪಾತ್ರ ಟ್ರೆಂಡ್ ಸೆಟ್ ಮಾಡಲಿದೆ. ಉಳಿದವರು ಕಂಡಂತೆ ಚಿತ್ರದಲ್ಲಿ ರಕ್ಷಿತ್ ಅವರ ಪಾತ್ರ ಹೇಗೆ ವಿಭಿನ್ನವಾಗಿತ್ತು. ಅದೇ ರೀತಿ ಈ ಚಿತ್ರದಲ್ಲೂ ರಕ್ಷಿತ್ ಅಭಿಮಾನಿಗಳಿಗೆ ಹತ್ತಿರವಾಗುತ್ತಾರೆ. ಈ ಚಿತ್ರ ರಕ್ಷಿತ್ ಶೆಟ್ಟಿಯನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುತ್ತದೆ.
ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಖಡಕ್ ಪೊಲೀಸ್ ಅಧಿಕಾರಿ ತರ ಅಲ್ಲದಿದ್ದರೂ ರಕ್ಷಿತ್ ಚಲನೆಗಳು ತುಂಬಾ ಅನಿರೀಕ್ಷಿತವಾಗಿರುತ್ತದೆ ಹಾಗೂ ಕುತೂಹಲದಿಂದ ಕೂಡಿರುತ್ತದೆ ಎಂದರು. 
ನಾರಾಯಣ ಪಾತ್ರವೂ ಯಾವುದೇ ರಿಯಲ್ ಸ್ಟೋರಿಯಿಂದ ಪ್ರೇರಣೆ ಹೊಂದಿಲ್ಲ. ಇನ್ನು ರಕ್ಷಿತ್ ಈ ಪಾತ್ರಕ್ಕೆ ಸೂಕ್ತವಾಗಿ ಹೊಂದಿಕೊಳ್ಳುತ್ತಾರೆ. ಅವರು ವಿಭಿನ್ನ ರೀತಿಯ ಪಾತ್ರ ಪ್ರಯೋಗಕ್ಕೆ ಸಿದ್ಧರಿದ್ದಾರೆ. ತುಂಬಾ ವರ್ಷಗಳಿಂದ ಅವರು ಇಂತಹ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಅಂತ ಅಂದುಕೊಂಡಿದ್ದರು ಎಂದು ಸಚಿನ್ ಹೇಳಿದ್ದಾರೆ. 
ಚಿತ್ರದಲ್ಲಿ ರಕ್ಷಿತ್ ಗೆ ಜೋಡಿಯಾಗಿ ಶಾನ್ವಿ ಶ್ರೀವಾತ್ಸವ್, ಬಾಲಾಜಿ ಮನೋಹರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಸೇರಿದಂತೆ ಹಲವರು ನಟಿಸಿದ್ದಾರೆ.
ಇನ್ನು ಚಿತ್ರದ ಚಿತ್ರೀಕರಣ ವೇಳೆ ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ಕುದುರೆ ಮೇಲಿನಿಂದ ಬಿದ್ದು ಗಾಯಗೊಂಡಿದ್ದರು ಎಂಬ ವಿಷಯ ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!